ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ಕಡೆ ಜನರ ಒಲವು ಹೆಚ್ಚಾಗುತ್ತಿದೆ: ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ವಿಜಯ ಕಟ್ಟಿಟ್ಟ ಬುತ್ತಿ: ಅಲ್ಪಸಂಖ್ಯಾತ ಘಟಕ ಅಧ್ಯಕ್ಷರಿಂದ ಸುದ್ದಿಗೋಷ್ಠಿ
ಬೆಳ್ತಂಗಡಿ: ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷದ ಕಡೆ ಜನರ ಒಲವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ವಿಜಯ ಕಟ್ಟಿಟ್ಟ ಬುತ್ತಿ ಎಂದು ಕಾಂಗ್ರೆಸ್ ಅಲ್ಪಸಂಖ್ಯಾತ ತಾಲೂಕು ಘಟಕದ ನಗರ ಅದ್ಯಕ್ಷ ಸಲೀಂ ಗುರುವಾಯನಕೆರೆ ಮತ್ತು ಗ್ರಾಮೀಣ ಅಧ್ಯಕ್ಷ ಅಶ್ರಫ್ ನೆರಿಯ ಹೇಳಿದರು.
ಅವರು ಬೆಳ್ತಂಗಡಿ ಗುರುನಾರಾಯಣ ಸಭಾಭವನದಲ್ಲಿ ಏ. 27 ರಂದು ಕರೆದ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದರು.
ಕಳೆದ 10 ದಿನಗಳಿಂದ ಈ ಪಕ್ಷದ ಕಾರ್ಯಕರ್ತರು ತಾಲೂಕಿನ ಮೂಲೆ ಮೂಲೆಗಳಲ್ಲಿ ಪಕ್ಷದ ನಾಲ್ಕು ಪ್ರಮುಖ ಗ್ಯಾರಂಟಿ ಕಾರ್ಡ್ ಗಳನ್ನು ವಿತರಿಸುವ ಕಾರ್ಯವನ್ನು ಮಾಡುತ್ತಿದ್ದಾರೆ. ಈ ಒಂದು ಗ್ಯಾರಂಟಿ ಕಾರ್ಡ್ ವಿತರಿಸುವ ಸಂದರ್ಭದಲ್ಲಿ ಮತದಾರರ ಬೆಂಬಲ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಾಂಗ್ರೆಸ್ ಪಕ್ಷಕ್ಕೆ ಹಳ್ಳಿ ಹಳ್ಳಿಯಲ್ಲಿ ಜನರು ಬೆಂಬಲ ನೀಡುತ್ತಿದ್ದಾರೆ ಇದು ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ವಿಜಯ ಕಟ್ಟಿಟ್ಟ ಬುತ್ತಿ. ಬಹುಮತದಿಂದ ಕಾಂಗ್ರೆಸ್ ಪಕ್ಷ ವಿಧಾನ ಸಭೆಯನ್ನು ಪ್ರವೇಶಿಸಲಿದ್ದಾರೆ ಏ. 17 ರಂದು ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನಾಮಪತ್ರ ಸಲ್ಲಿಸುವ ವೇಳೆ ಅಭೂತಪೂರ್ವ ಜನಸಂಖ್ಯೆ ಸೇರಿದೆ. ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು ಕಂಡು ಹರೀಶ್ ಪೂಂಜರು ಹತಾಶರಾಗಿದ್ದಾರೆ. ಏ.17 ರಂದು ಕಾಂಗ್ರೆಸ್ ಪಕ್ಷದ ಜನಸಾಗರವನ್ನು ನೋಡಿ ಹರೀಶ್ ಪೂಂಜ ತುರ್ತು ಸಭೆಯನ್ನು ಕರೆದು ಬೆಳ್ತಂಗಡಿ ಯಲ್ಲಿ ಬಹುದೊಡ್ಡ ಜನಸಮೂಹವೇ ಬಿಜೆಪಿ ಬಿಟ್ಟು ಕಾಂಗ್ರೆಸ್ ಪಕ್ಷ ಸೇರಿದೆ ಇಲ್ಲಿ ವಿಜಯ ಸಾಧ್ಯವಿಲ್ಲ ಎಂದು ಉಪಾಯವನ್ನು ಮಾಡಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಮೀಣ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರು ಅಶ್ರಫ್ ನೆರಿಯ, ನಗರದ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸಲೀಂ, ಡಿಸಿಸಿ ಸದಸ್ಯರಾದ ಹಾಜಿರ, ಜಿಲ್ಲಾ ಕಾಂಗ್ರೆಸ್ ಸದಸ್ಯ ಹಾಗೂ ಅಲ್ಪಸಂಖ್ಯಾತ ಘಟಕದ ದ.ಕ ಜಿಲ್ಲಾ ಉಪಾಧ್ಯಕ್ಷ ಪಿ ಟಿ ಸೆಬಾಸ್ಟಿನ್, ಕಾರ್ಮಿಕ ಘಟಕ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಹಿಮಾನ್ ಪಡ್ಪು, ಮಹಮ್ಮದ್ ರಫಿ, ಅಬ್ದುಲ್ ಕರೀಂ ಗೇರುಕಟ್ಟೆ ಮೊದಲಾದವರು ಉಪಸ್ಥಿತರಿದ್ದರು.