ಪುಂಜಾಲಕಟ್ಟೆ: ಕಾರು- ಬೈಕ್ ಅಪಘಾತ: ಬೈಕ್ ಸವಾರ ಸಾವು, ಸಹಸವಾರ ಗಂಭೀರ ಗಾಯ

ಪುಂಜಾಲಕಟ್ಟೆ: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟು, ಸಹಸವಾರ ತೀವ್ರ ಗಂಭೀರ ಗಾಯಗೊಂಡಿರುವ ಘಟನೆ ಏ. 28 ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ವಗ್ಗ ಸಮೀಪದ ಬಾಂಬಿಲ ಎಂಬಲ್ಲಿ ನಡೆದಿದೆ.
ಮೃತಪಟ್ಟ ಸವಾರ ಅಮ್ಟಾಡಿ ನಿವಾಸಿ ಸಂದೀಪ್ ಲೋಬೋ ಹಾಗೂ ಸಹ ಸವಾರ ಆಕಾಶ್ ಗಂಭೀರ ಗಾಯಗೊಂಡವರು. ಇವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.