• January 16, 2025

ಗುರುವಾಯನಕೆರೆ: ಖಾಸಗಿ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

 ಗುರುವಾಯನಕೆರೆ: ಖಾಸಗಿ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

 

ಗುರುವಾಯನಕೆರೆ: ಮೆಡಿಕಲ್ ಕೋರ್ಸ್ ಪ್ರವೇಶಕ್ಕಾಗಿ ಲಾಂಗ್ ಟರ್ಮ್ ನೀಟ್ ವಿದ್ಯಾಭ್ಯಾಸಕ್ಕಾಗಿ ಹಾಸ್ಟೆಲ್‌ಗೆ ಬಂದಿದ್ದ ವಿದ್ಯಾರ್ಥಿನಿಯೊಬ್ಬಳು ವೈಯಕ್ತಿಕ ಆತ್ಮಹತ್ಯೆ ಮಾಡಿ ಸಾವನ್ನಪ್ಪಿದ ಘಟನೆ ಏ.28 ರಂದು ಗುರುವಾಯನಕೆರೆಯಲ್ಲಿರುವ ಖಾಸಗಿ ವಿದ್ಯಾ ಸಂಸ್ಥೆಯಲ್ಲಿ ನಡೆದಿದೆ.


ತುಮಕೂರು ಜಿಲ್ಲೆಯ ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ವಿದ್ಯಾನಗರ ಎರಡನೇ ಅಡ್ಡ ರಸ್ತೆಯ ನಿವಾಸಿ ಸನಾವುಲ್ಲ ಮತ್ತು ಸೀಮಾ ಪರ್ವಿನ್ ದಂಪತಿಗಳ ಪುತ್ರಿ ಉಮೆ ಉಜ್ರಾ ಎಸ್. (19 ವ.) ಎಂಬವರು ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮದ ಗುರುವಾಯನಕೆರೆಯಲ್ಲಿರುವ ಖಾಸಗಿ ವಿದ್ಯಾ ಸಂಸ್ಥೆಯಲ್ಲಿ ಮೆಡಿಕಲ್ ಕೋರ್ಸ್ ಪ್ರವೇಶಕ್ಕಾಗಿ ಲಾಂಗ್ ಟರ್ಮ್ ನೀಟ್ ವಿದ್ಯಾಭ್ಯಾಸ ಮಾಡಿಕೊಂಡಿದ್ದು ಕಾಲೇಜು ಹಾಸ್ಟೆಲಿನಲ್ಲಿ ಉಳಿದುಕೊಂಡಿದ್ದರು.ವಿದ್ಯಾರ್ಥಿನಿಯು ಏ. 28 ರಂದು ಬೆಳಗ್ಗೆ ಸುಮಾರು 5 ಗಂಟೆ ವೇಳೆಗೆ ಆಕೆ ಉಳಿದುಕೊಂಡಿದ್ದ ಕಟ್ಟಡದ ಮಹಡಿಯಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು. ಅವರನ್ನು ತಕ್ಷಣ ಆಡಳಿತ ಮಂಡಳಿಯು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದಾಗ ಚಿಕಿತ್ಸೆ ಫಲಿಸದೆ ಬೆಳಗ್ಗೆ 9 ಗಂಟೆಗೆ ವಿದ್ಯಾರ್ಥಿನಿ ಉಮೆ ಉಟ್ ರವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.


ವಿದ್ಯಾರ್ಥಿನಿಯು ವೈಯಕ್ತಿಕವಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಮಾಹಿತಿ ಲಿಬಿಸಿದ್ದು. ಈ ಬಗ್ಗೆ ತಂದೆ ಸನಾವುಲ್ಲರವರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Related post

Leave a Reply

Your email address will not be published. Required fields are marked *

error: Content is protected !!