• October 16, 2024

ಕಾಂಗ್ರೆಸ್ ಪಕ್ಷ ಪ್ರಣಾಳಿಕೆ ಬಿಡುಗಡೆ:ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಜರಂಗದಳ, ಪಿಎಫ್ ಐ ನಿಷೇಧ

 ಕಾಂಗ್ರೆಸ್ ಪಕ್ಷ ಪ್ರಣಾಳಿಕೆ ಬಿಡುಗಡೆ:ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಜರಂಗದಳ, ಪಿಎಫ್ ಐ ನಿಷೇಧ

 

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪ್ರಮುಖ ನಾಯಕರಾದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ರಂದೀಪ್ ಸಿಂಗ್ ಸುರ್ಜೆವಾಲಾ ಮೊದಲಾದವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಪ್ರಣಾಳಿಕೆ ಬಿಡುಗಡೆಗೊಳಿಸಿದೆ.

ಪ್ರಮುಖ ಪ್ರಣಾಳಿಕೆ
೧ ಗೃಹಜ್ಯೋತಿ ಯೋಜನೆಯಡಿ ೨೦೦ ಯೂನಿಟ್ ಉಚಿತ ವಿದ್ಯುತ್
೨ ಅನ್ನಭಾಗ್ಯ ಯೋಜನೆಯಡಿ ಪ್ರತೀ ವ್ಯಕ್ತಿಗೆ ೧೦ಕೆಜಿ ಉಚಿತ ಅಕ್ಕಿ
೩ಗೃಹಲಕ್ಷಮಿ ಯೋಜನೆಯಡಿ ಮನೆ ಯಜಮಾನಿಗೆ ೨ ಸಾವಿರ ರೂಪಾಯಿ
೪ ಯುವನಿಧಿ ಯೋಜನೆಯಡಿ ನಿರುದ್ಯೋಗ ಯುವಕರಿಗೆ ನೆರವು,
೫ ಪದವೀಧರರಿಗೆ ೩ ಸಾವಿರ ರೂ
೬ ಡಿಪ್ಲೊಮೊ ಪದವೀಧರರಿಗೆ ೧೫೦೦ರೂ
೭ ಸರ್ಕಾರದಲ್ಲಿ ಒಂದು ವರ್ಷದಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳ ಭರ್ತಿ
೮ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ನೌಕರರಿಗೆ ಖಾಯಂ
೯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನೌಕರರ ಖಾಯಾಂ ಹೀಗೆ ಹತ್ತು ಹಲವು ಕಾರ್ಯಕ್ರಮಗಳನ್ನು ಕಾಂಗ್ರೆಸ್ ಪ್ರಣಾಳಿಕೆ ಹೊಂದಿದೆ.

ಇನ್ನು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಜರಂಗದಳ, ಪಿಎಫ್ ಐ ನಿಷೇಧ ಮಾಡುವುದಾಗಿ ಹೇಳಿದೆ.

Related post

Leave a Reply

Your email address will not be published. Required fields are marked *

error: Content is protected !!