• October 27, 2024

ಬೆಳ್ತಂಗಡಿ: ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಪರ ಮಹಿಳಾ ಕಾರ್ಯಕರ್ತರಿಂದ ಮತಯಾಚನೆ

 ಬೆಳ್ತಂಗಡಿ: ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಪರ ಮಹಿಳಾ ಕಾರ್ಯಕರ್ತರಿಂದ ಮತಯಾಚನೆ

 

ಬೆಳ್ತಂಗಡಿ : ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಅವರ ಪರವಾಗಿ ಸಂಜಯ ನಗರ, ರೆಂಕೆದ ಗುತ್ತು ವಾರ್ಡ್‌ನಲ್ಲಿ ಮಹಿಳಾ ಕಾರ್ಯಕರ್ತರು ಮನೆ ಮನೆಗೆ ತೆರಳಿ ಮೇ.2 ರಂದು ಮತ ಯಾಚಿಸಿದರು.

“ಬೆಳ್ತಂಗಡಿಯ ಸರ್ವಾಂಗೀಣ ಅಭಿವೃದ್ಧಿಗೆ ಈ ಬಾರಿಯ ಚುನಾವಣೆಯಲ್ಲಿ ತಮ್ಮ ಅಮೂಲ್ಯವಾದ ಮತವನ್ನು ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಅವರಿಗೆ ನೀಡುವ ಮೂಲಕ ಅವರನ್ನು ಬಹುಮತದಿಂದ ಗೆಲ್ಲಿಸಬೇಕಾಗಿ ಕೇಳಿಕೊಳ್ಳುತ್ತೇನೆ.” ಎಂದು ಅಕ್ಬರ್ ಬೆಳ್ತಂಗಡಿ ಅವರ ಪತ್ನಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ನಗರ ವ್ಯಾಪ್ತಿಯ ಎಸ್‌ಡಿಪಿಐ ಪಕ್ಷದ ಮಹಿಳಾ ಘಟಕದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Related post

Leave a Reply

Your email address will not be published. Required fields are marked *

error: Content is protected !!