• December 8, 2024

ಬೆಳ್ತಂಗಡಿ: ಭಜರಂಗದಳ ನಿಷೇಧ:ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯನ್ನು ಖಂಡಿಸಿದ ಹರೀಶ್ ಪೂಂಜ

 ಬೆಳ್ತಂಗಡಿ: ಭಜರಂಗದಳ ನಿಷೇಧ:ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯನ್ನು ಖಂಡಿಸಿದ ಹರೀಶ್ ಪೂಂಜ

 

ಬೆಳ್ತಂಗಡಿ: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಭಜರಂಗದಳ ಸಂಘಟನೆಯನ್ನು ನಿಷೇಧಿಸುವುದಾಗಿ ಬಿಡುಗಡೆಗೊಳಿಸಿದ ಕಾಂಗ್ರೆಸ್ ಪ್ತಣಾಳಿಕೆ ವಿರುದ್ದ ಬೆಳ್ತಂಗಡಿ ಹಾಲಿ ಶಾಸಕ ಹರೀಶ್ ಪೂಂಜ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಸಮಾಜ ವಿರೋಧಿ ಚಟುವಟಿಕೆಗಳ ವಿರುದ್ಧ ಸದಾ ಗುಡುಗುವ ಭಜರಂಗದಳ ಸಂಘಟನೆಯನ್ನು ನಿಷೇಧಿಸುವುದು ಸರಿಯಲ್ಲ. ಅಯೋಧ್ಯೆ ಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಶಕ್ತಿ ತುಂಬಿದ ಭಜರಂಗದಳ ವನ್ನು ಹಳ್ಳಿ ಹಳ್ಳಿಯಲ್ಲಿರುವ ದೇವಸ್ಥಾನ, ದೈವಸ್ಥಾನಗಳ ಜೀರ್ಣೋದ್ಧಾರ ದ ಮೂಲಕ ಸಂರಕ್ಷಣೆ ಮಾಡುತ್ತಿರುವ ಭಜರಂಗದಳ ಸಂಘಟನೆಯನ್ನು ನಿಷೇಧಿಸುವ ಆಶ್ವಾಸನೆಯನ್ನು ಕಾಂಗ್ರೆಸ್ ಪಕ್ಷ ನೀಡಿದೆ. ಕಾಂಗ್ರೆಸ್ ಪಕ್ಷದ ನಿರ್ಧಾರ ಹಿಂದೂ ದಮನಕಾರಿ ನೀತಿಯನ್ನು ಪ್ರದರ್ಶಿಸುತ್ತಿದೆ ಎಂದು ತಿಳಿಸಿದರು.

Related post

Leave a Reply

Your email address will not be published. Required fields are marked *

error: Content is protected !!