ಕಾಂಗ್ರೆಸ್ ವಿರುದ್ಧ ಇಂದು ರಾಜ್ಯಾದ್ಯಂತ ರಾಮ, ಆಂಜನೇಯ ದೇವಸ್ಥಾನಗಳಲ್ಲಿ ಹನುಮಾನ್ ಚಾಲೀಸಾ ಪಠಣ
ಕಾಂಗ್ರೆಸ್ ಪಕ್ಷ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಕುರಿತು ಪ್ರಸ್ತಾಪಿಸಿರುವುದರ ವಿರುದ್ಧ ತಿರುಗಿಬಿದ್ದಿರುವ ವಿಶ್ವ ಹಿಂದೂ ಪರಿಷದ್ ಹಾಗೂ ಬಜರಂಗದಳ ಇಂದು ಮೇ. 4 ರಂದು 7 ಗಂಟೆಗೆ ರಾಜ್ಯಾದ್ಯಂತ ರಾಮ, ಆಂಜನೇಯ ದೇವಸ್ಥಾನಗಳಲ್ಲಿ ಹನುಮಾನ್ ಚಾಲೀಸ ಪಠಣ ಅಭಿಯಾನ ನಡೆಸುವುದಾಗಿ ಹಾಗೂ ಮನೆಮನೆಗೆ ತೆರಳಿ ಕಾಂಗ್ರೆಸ್ ಗೆ ಮತ ನೀಡದಂತೆ ಜಾಗೃತಿ ಮೂಡಿಸುವುದಾಗಿ ತಿಳಿಸಿದೆ.
ಬೆಂಗಳೂರು ದಕ್ಷಿಣ ವಿಭಾಗದ ಸಂಯೋಜಕ ಗೋವರ್ಧನ್ ಎಲ್ಲಾ ಜಿಲ್ಲಾ ಕೇಂದ್ರ ತಾಲೂಕು ಕೇಂದ್ರಗಳಲ್ಲಿ ಹನುಮಾನ್ ಚಾಲೀಸ ಪಠಣದ ಮೂಲಕ ಬಜರಂಗಿಗಳ ಒಗ್ಗಟ್ಟನ್ನು ಸಾರುತ್ತೇವೆ ಎಂದಿದ್ದಾರೆ.