ಬಳಂಜ: ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬಳಂಜ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಳಂಜ, ನಾಲ್ಕೂರು,ತೆಂಕಕಾರಂದೂರು ಇದರ ವತಿಯಿಂದ ನಡೆಯುವ 35 ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ.ವಸಂತ ಸಾಲಿಯಾನ್ ಬಿಡುಗಡೆಗೊಳಿಸಿ ಕಾರ್ಯಕ್ರಮವು ಯಾವುದೇ ಅಡಚಣೆಯಿಲ್ಲದೆ ಸುಸೂತ್ರವಾಗಿ ನಡೆಯಲಿ ಎಂದು ಶುಭಹಾರೈಸಿದರು.
ಈ ಸಂದರ್ಭದಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಬಳಂಜ, ಪ್ರ.ಕಾರ್ಯದರ್ಶಿ ಯಶೋಧರ ಶೆಟ್ಟಿ ಅಟ್ಲಾಜೆ,ಉಪಾಧ್ಯಕ್ಷ ಕರುಣಾಕರ ಹೆಗ್ಡೆ ಬೊಕ್ಕಸ,ಪ್ರಗತಿಪರ ಕೃಷಿಕ ವಿಶ್ವನಾಥ ಹೊಳ್ಳ,ಸಮಿತಿ ಮಾಜಿ ಅಧ್ಯಕ್ಷರುಗಳಾದ ಸಂತೋಷ್ ಕುಮಾರ್ ಕಾಪಿನಡ್ಕ, ದಿನೇಶ್ ಪೂಜಾರಿ ಅಂತರ, ವಿಜಯ ಹೆಗ್ಡೆ ಬಳಂಜ, ಜೊತೆ ಕಾರ್ಯದರ್ಶಿ ಪ್ರವೀಣ್ ಡಿ ಕೋಟ್ಯಾನ್,ಸಾಂಸ್ಕೃತಿಕ ಕಾರ್ಯದರ್ಶಿ ಶರತ್ ಅಂಚನ್ ಹಾಗೂ ಮೊದಲಾದವರು ಉಪಸ್ಥಿತರಿದ್ದರು.