ಮೇ.6 ರಂದು ಹರೀಶ್ ಪೂಂಜರ ಪರ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿರುವ ಅಸ್ಸಾಂ ನ ಮುಖ್ಯಮಂತ್ರಿ:ಫೈರ್ ಬ್ರ್ಯಾಂಡ್ ರೋಡ್ ಶೋ
ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಹರೀಶ್ ಪೂಂಜರ ಪರ ಚುನಾವಣಾ ಪ್ರಚಾರದಲ್ಲಿ ಮೇ.6 ರಂದು ಅಸ್ಸಾಂನ ಮುಖ್ಯಮಂತ್ರಿ ಡಾ ಹಿಮಂತ್ ಬಿಸ್ವಾ ಶರ್ಮ ಭಾಗಿಯಾಗಲಿದ್ದಾರೆ.
ನಾಳೆ ಸಂಜೆ 5 ಗಂಟೆಗೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಬಳಿಯಿಂದ ಉಜಿರೆ ಜನಾರ್ಧನ ಸ್ವಾಮಿ ದೇವಸ್ಥಾನದ ವರೆಗೆ ಬೃಹತ್ ರೋಡ್ ಶೋ ನಲ್ಲಿ ಭಾಗಿಯಾಗಲಿದ್ದಾರೆ. ಬಿಜೆಪಿ ಜಿಲ್ಲೆ ಹಾಗೂ ತಾಲೂಕಿನ ಪ್ರಮುಖ ನಾಯಕರು ಭಾಗಿಯಾಗಲಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ ಜಯಂತ್ ಕೋಟ್ಯಾನ್ ತಿಳಿಸಿದ್ದಾರೆ