• July 16, 2024

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ:ಮೂವರು ಹಂತಕರು ಪೊಲೀಸ್ ವಶ

 ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ:ಮೂವರು ಹಂತಕರು ಪೊಲೀಸ್ ವಶ

ರಾಜ್ಯಾದ್ಯಂತ ಸಂಚಲನಕ್ಕೆ ಕಾರಣವಾಗಿದ್ದ ಪ್ರವೀಣ್‌ ನೆಟ್ಟಾರ್‌ ಹತ್ಯೆ ಪ್ರಕರಣದ ತನಿಖೆ ಕೊನೆಗೂ ಒಂದು ಹಂತ ಮುಟ್ಟಿದೆ .

ಕಳೆದ ಹದಿನೈದು ದಿನದಿಂದ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದ ಮೂವರು ಹಂತಕರು ಕೊನೆಗೂ ನಿನ್ನೆ ರಾತ್ರಿ ಪೊಲೀಸ್‌ ಬಲೆಗೆ ಬಿದ್ದಿದ್ದಾರೆ ಎನ್ನಲಾಗಿದೆ.

ಪ್ರಮುಖ ಮೂರು ಆರೋಪಿಗಳು ಸೇರಿದಂತೆ ಒಟ್ಟು ಹತ್ತು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿರುವುದಾಗಿ ತಿಳಿದು ಬಂದಿದೆ .

ಇದರಲ್ಲಿ ಮೂವರು ಮಹಿಳೆಯರು ಸೇರಿದ್ದಾರೆ ಎನ್ನಲಾಗಿದೆ. ಈ ಮಾಹಿತಿ ಖಚಿತವಾದರೇ ಒಟ್ಟು ಬಂಧಿತರ ಸಂಖ್ಯೆ 17ಕ್ಕೆರಲಿದೆ.

ಪ್ರಮುಖ ಮೂವರು ಆರೋಪಿಗಳಿಗೆ ಆಶ್ರಯ ನೀಡಿದ್ದ ಮೂರು ಮಂದಿ ಮಹಿಳೆಯರು ಹಾಗೂ ಆರು ಮಂದಿ ಪುರುಷರನ್ನು ಪೊಲೀಸರು ಬಂಧಿಸಿರುವುದಾಗಿ ಮಾಹಿತಿ ಲಭ್ಯವಾಗಿದ್ದು, ಇವರು ಹಂತಕರು ಅಂತಾ ತಿಳಿದಿದ್ದರೂ ಊಟ,ಆಶ್ರಯ ಹಣ ಸಹಾಯ ನೀಡಿದ್ದರು ಎನ್ನಲಾಗಿದೆ.

ಹಂತಕರಿಗೆ ಆಶ್ರಯ ನೀಡಿದ ಎಲ್ಲರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಅಲ್ಲದೇ ಹತ್ಯೆಗೆ ಬಳಸಿದ ಮಾರಾಕಾಯುಧಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Related post

Leave a Reply

Your email address will not be published. Required fields are marked *

error: Content is protected !!