ಎಸ್ ಎಸ್ ಎಲ್ ಸಿ ಫಲಿತಾಂಶ: ಶೇ 83.89 ಫಲಿತಾಂಶ: 4 ವಿದ್ಯಾರ್ಥಿಗಳಿಗೆ ಶೇ 100 ಫಲಿತಾಂಶ
ಕರ್ನಾಟಕ ಎಸ್ ಎಸ್ ಎಲ್ ಸಿ ಫಲಿತಾಂಶ ಇದೀಗ ಪ್ರಕಟಗೊಂಡಿದ್ದು, ಈ ಬಾರಿ ಶೇ.83.89 ಫಲಿತಾಂಶ ಬಂದಿದೆ.
ಈ ಬಾರಿ 4 ವಿದ್ಯಾರ್ಥಿಗಳಿಗೆ 625 ಅಂಕ ಲಭಿಸಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷ ರಾಮಚಂದ್ರ, ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದ್ದಾರೆ. 11 ಗಂಟೆ ನಂತರ karresults.nic.in ವೆಬ್ ಸೈಟ್ ನಲ್ಲಿ ಫಲಿತಾಂಶ ನೋಡಬಹುದಾಗಿದೆ.