• October 27, 2024

ನಾಳೆ ವಿಧಾನ ಸಭಾ ಚುನಾವಣೆ ಹಿನ್ನೆಲೆ: ಸಾರ್ವತ್ರಿಕ ರಜೆ ಘೋಷಣೆ

 ನಾಳೆ ವಿಧಾನ ಸಭಾ ಚುನಾವಣೆ ಹಿನ್ನೆಲೆ: ಸಾರ್ವತ್ರಿಕ ರಜೆ ಘೋಷಣೆ

 

ಕರ್ನಾಟಕ ವಿಧಾನಸಭಾ ಚುನಾವಣಾ ಹಿನ್ನೆಲೆ ಮತದಾನ ನಡೆಯಲಿರುವ ಕಾರಣ ಎಲ್ಲಾ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಕಚೇರಿಗಳಿಗೆ ಶಾಲಾ ಕಾಲೇಜುಗಳಿಗೆ ಸಂಘ ಸಂಸ್ಥೆಗಳಿಗೆ ಹಾಗೂ ಖಾಸಗಿ ಸಂಸ್ಥೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ.

ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ಕರ್ನಾಟಕ ವಿಧಾನಸಭಾ ಚುನಾವಣೆಗೆ ಮೇ 10 ರಂದು ಮತದಾನ ನಡೆಯಲಿದೆ. ಮತ ಚಲಾಯಿಸಲು ಅನುಕೂಲವಾಗುವಂತೆ ಆಯಾ ಮತ ಕ್ಷೇತ್ರಗಳ ಎಲ್ಲಾ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಕಚೇರಿಗಳಿಗೆ, ಶಾಲಾ ಕಾಲೇಜುಗಳಿಗೆ ವಿವಿಧ ಸಂಘ ಸಂಸ್ಥೆಗಳಿಗೆ ಮತ್ತು ಖಾಸಗಿ ಸಂಸ್ಥೆಗಳಿಗೆ ಅಂದರೆ ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ ಸರ್ಕಾರವು ಆಯಾ ಚುನಾವಣಾ ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲು ನಾಳೆ ಸಾರ್ವತ್ರಿಕ ರಜೆಯನ್ನು ಘೋಷಿಸಿದೆ. ಈ ರಜೆಯು ತುರ್ತು ಸೇವೆಗಳಿಗೆ ಅನ್ವಯಿಸುವುದಿಲ್ಲ ಎಂದಿದ್ದಾರೆ.

Related post

Leave a Reply

Your email address will not be published. Required fields are marked *

error: Content is protected !!