ಕಲ್ಮಂಜ:ಮೀನು ಹಿಡಿಯಲು ಹೋದ ವ್ಯಕ್ತಿ ಆಕಸ್ಮಿಕ ಸಾವು

ಕಲ್ಮಂಜ: ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಉಣಿಪಾಜೆ ಎಂಬಲ್ಲಿ ಮೇ.11 ರಂದು ರಾತ್ರಿ ಮೀನು ಹಿಡಿಯಲು ಹೋಗಿದ್ದ ವೇಳೆ ಆಕಸ್ಮಿಕವಾಗಿ ಮೃತಪಟ್ಟ ಘಟನೆ ಕುಕ್ಕೆಮಜಲು ಎಂಬಲ್ಲಿ ನಡೆದಿದೆ.
ಕೃಷ್ಣಪ್ಪ ಗೌಡ (60)ಮೃತಪಟ್ಟ ದುರ್ದೈವಿ.
ಪಜಿರಡ್ಕ ದೇವಸ್ಥಾನದಿಂದ ಅರ್ಧ ಕಿಲೋ ಮೀಟರ್ ದೂರದಲ್ಲಿ ದೇವರಗುಂಡಿ ಎಂಬಲ್ಲಿ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಉಜಿರೆ ಧರ್ಮಸ್ಥಳ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದ್ದು, ನಂತರ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿತ್ತು ಆದರೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಮೃತರು ಪತ್ನಿ ಕವಿತ ಹಾಗೂ ಮೂವರು ಮಕ್ಕಳನ್ನು ಮತ್ತು ಬಂದುವರ್ಗದವರನ್ನು ಅಗಲಿದ್ದಾರೆ.
ಶವವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.