• November 22, 2024

ಮೇ.13 ಮತ ಎಣಿಕೆ ಹಿನ್ನೆಲೆ ದ.ಕ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ

 ಮೇ.13 ಮತ ಎಣಿಕೆ ಹಿನ್ನೆಲೆ ದ.ಕ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ

 

ಮಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಮೇ. 13 ರಂದು ನಡೆಯಲಿರುವ ಹಿನ್ನೆಲೆಯಲ್ಲಿ ದ.ಕ ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿಗೊಳಿಸಿ ದ.ಕ ಜಿಲ್ಲಾಧಿಕಾರಿ ಎಮ್ ಆರ್ ರವಿ ಕುಮಾರ್ ಆದೇಶ ಹೊರಡಿಸಿದ್ದಾರೆ.

ಮೇ.13 ರಂದು ಬೆಳಗ್ಗೆ 5 ರಿಂದ 12 ರವರೆಗೆ ಈ ಆದೇಶ ಜಾರಿಯಲ್ಲಿರಲಿದೆ. ಮದುವೆ, ಧಾರ್ಮಿಕ ಮೆರವಣಿಗೆಗೆ ಹಾಗೂ ಕೋವಿಡ್ 19 ಕಾರ್ಯಗಳಿಗೆ, ಶವ ಸಂಸ್ಕಾರ ಹೀಗೆ ಕೆಲವೊಂದು ಕಾರ್ಯಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ ಎಂದು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ನಿಷೇದಾಜ್ಞೆ ವಿಧಿಸಿ ಆದೇಶ ಹೊರಡಿಸುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Related post

Leave a Reply

Your email address will not be published. Required fields are marked *

error: Content is protected !!