ಶ್ರೀ ರಾಮ ಭಜನಾ ಮಂಡಳಿ ಹುಣ್ಸೆಕಟ್ಟೆ ವತಿಯಿಂದ ಡಾ||ಡಿ ವೀರೇಂದ್ರ ಹೆಗ್ಗಡೆಯವರಿಗೆ ಅಭಿನಂದನೆ
ಧರ್ಮಸ್ಥಳ : ರಾಜ್ಯ ಸಭೆಗೆ ನಾಮ ನಿರ್ದೇಶನಗೊಂಡ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ||ಡಿ ವೀರೇಂದ್ರ ಹೆಗ್ಗಡೆಯವರಿಗೆ ಶ್ರೀ ರಾಮ ಭಜನಾ ಮಂಡಳಿ ಹುಣ್ಸೆಕಟ್ಟೆ ವತಿಯಿಂದ ಆ. 14 ರಂದು ಅಭಿನಂದನೆಯನ್ನು ತಿಳಿಸಲಾಯಿತು ಹಾಗೂ ಹುಣ್ಸೆಕಟ್ಟೆ ಸಮುದಾಯ ಭವನದಲ್ಲಿ ಆಚರಿಸಲಾಗುವ 22 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೊತ್ಸವ ದ ಆಮಂತ್ರಣ ಪತ್ರಿಕೆಯನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಶ್ರೀ ರಾಮ ಭಜನಾ ಮಂಡಳಿಯ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ ಹಾಗೂ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.