• October 14, 2024

ಬೆಳ್ತಂಗಡಿ ಎಸ್‌ಡಿಪಿಐ ಕಚೇರಿಯಲ್ಲಿ ವಿಧಾನಸಭಾ ಚುನಾವಣೆ ಅವಲೋಕನ ಸಭೆ

 ಬೆಳ್ತಂಗಡಿ ಎಸ್‌ಡಿಪಿಐ ಕಚೇರಿಯಲ್ಲಿ ವಿಧಾನಸಭಾ ಚುನಾವಣೆ ಅವಲೋಕನ ಸಭೆ

 

ಬೆಳ್ತಂಗಡಿ: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ವಿಧಾನಸಭಾ ಚುನಾವಣೆ ಅವಲೋಕನ ಸಭೆ ಪಕ್ಷದ ಕಚೇರಿಯಲ್ಲಿ ಕ್ಷೇತ್ರಾಧ್ಯಕ್ಷರಾದ ನವಾಝ್ ಕಟ್ಟೆ ನೇತೃತ್ವದಲ್ಲಿ ನಡೆಯಿತು.


ವೀಕ್ಷಕರಾಗಿ ಎಸ್‌ಡಿಪಿಐ ರಾಜ್ಯ ಸಮಿತಿ ಸದಸ್ಯರಾದ ರಿಯಾಜ್ ಕಡಂಬು, ಜಿಲ್ಲಾಧ್ಯಕ್ಷರಾದ ಅನ್ವರ್ ಸಾದಾತ್ ಬಜತ್ತೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಅಡ್ಡೂರು, ಜಿಲ್ಲಾ ಕಾರ್ಯದರ್ಶಿ ಸುಹೇಲ್ ಖಾನ್ ಆಗಮಿಸಿದ್ದರು.


ಈ ಸಂದರ್ಭದಲ್ಲಿ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ, ಕ್ಷೇತ್ರ ಕಾರ್ಯದರ್ಶಿ ನಿಜಾಮ್ ಗೇರುಕಟ್ಟೆ, ಕ್ಷೇತ್ರ ಸಮಿತಿ ಪದಾಧಿಕಾರಿಗಳು, ಬ್ಲಾಕ್ ಸಮಿತಿ ಪದಾಧಿಕಾರಿಗಳು, ಗ್ರಾಮ ಸಮಿತಿ ನಾಯಕರು, ಗ್ರಾಮ ಪಂಚಾಯತ್ ಸದಸ್ಯರು, ಚುನಾವಣಾ ಉಸ್ತುವಾರಿಗಳು, ಪಕ್ಷದ ಹಿರಿಯರು ಉಪಸ್ಥಿತರಿದ್ದರು.

Related post

Leave a Reply

Your email address will not be published. Required fields are marked *

error: Content is protected !!