• October 16, 2024

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಾಲೆಯಲ್ಲಿ ಭೌತಶಾಸ್ತ್ರ ಶಿಕ್ಷಕರ ಒಂದು ದಿನದ ಕಾರ್ಯಾಗಾರ

 ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಾಲೆಯಲ್ಲಿ ಭೌತಶಾಸ್ತ್ರ ಶಿಕ್ಷಕರ ಒಂದು ದಿನದ ಕಾರ್ಯಾಗಾರ

 

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಾಲೆಯಲ್ಲಿ ಭೌತಶಾಸ್ತ್ರ ಶಿಕ್ಷಕರ ಒಂದು ದಿನದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.

ಮುಂದಿನ ದಿನಗಳಲ್ಲಿ ವಿವಿಧ ವಿಷಯಗಳಿಗೆ ಹಾಗೂ ವಿಚಾರಿಕ ಸಂಬಂಧ ಪಟ್ಟ ಹಲವಾರು ಕಾರ್ಯಗಾರಗಳಿದ್ದು ಅದರ ಮುನ್ಸೂಚನೆಯೊಂದಿಗೆ ಮುನ್ಸೂಚನೆಯೊಂದಿಗೆ ಸರಣಿ ಕಾರ್ಯಗಾರಗಳ ಉದ್ಘಾಟನೆಯನ್ನು , ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಶ್ರೀಯುತ. ಸತೀಶ್ ಚಂದ್ರ ಇವರು ದೀಪ ಬೆಳಗಿಸಿ ಉದ್ಘಾಟಿಸಿದರು.

ತದನಂತರ ಮಾತನಾಡಿದ ಅವರು ಶಿಕ್ಷಕರು ಬದಲಾಗುತ್ತಿರುವ ವರ್ತಮಾನಕ್ಕೆ ಸರಿಯಾಗಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು. ಸದಾ ಹೊಸತನವನ್ನು ಕಲಿಯುವ ವಾಂಚೆ ಇರಬೇಕು. ಚಟುವಟಿಕೆಗಳ ಮುಖಾಂತರ ಕಲಿತಂತಹ ವಿದ್ಯೆ ಯಾವತ್ತು ಶಾಶ್ವತವಾಗಿರುತ್ತದೆ. ಮನದಾಳಕ್ಕೆ ಇಳಿದು ಸುಲಭವಾಗಿ ಅರ್ಥವಾಗುತ್ತದೆ ಹೀಗಾಗಿ ವಿಜ್ಞಾನ ಎಂದರೆ ಪ್ರಾಯೋಗಿಕವಾಗಿ ಕಲಿಸಿದರೆ ಮಾತ್ರ ಅದು ಮಕ್ಕಳ ಮನಸ್ಸಿನೊಳಕ್ಕೆ ಇಳಿಯುತ್ತದೆ ಎಂದರು.

ಈ ವಿಜ್ಞಾನ ಕಾರ್ಯಾಲಯದಲ್ಲಿ ಭೌತಶಾಸ್ತ್ರಕ್ಕೆ ಸಂಬಂಧಿಸಿದ ಅನೇಕ ವಿಚಾರಗಳನ್ನು ಹಾಗೂ ಪ್ರಾಯೋಗಿಕ ವಿಧಾನಗಳನ್ನು ಸುಲಭವಾಗಿ ಮಕ್ಕಳಿಗೆ ಅರ್ಥೈಸುವಂತೆ ಮಾಡುವ ಚಟುವಟಿಕೆಗಳನ್ನು ಈ ಕಾರ್ಯ ಆಕಾರದ ಸಂಪನ್ಮೂಲ ವ್ಯಕ್ತಿಯಾದ ಶ್ರೀಯುತ ರವೀಶ್ ಅತ್ಯಂತ ಮಾರ್ಮಿಕವಾಗಿ ವಿವರಿಸಿದರು.

ಈ ಕಾರ್ಯಗಾರದಲ್ಲಿ ಸುಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿಯಾಗಿರುವ ಶ್ರೀಯುತ ಬಿ ಸೋಮಶೇಖರ್ ಶೆಟ್ಟಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಆಡಳಿತಕ್ಕೆ ಒಳಪಟ್ಟ ವಿವಿಧ ಶಾಲಾ ಮುಖ್ಯೋಪಾಧ್ಯಾಯರುಗಳು, ಹಾಗೂ ವಿಜ್ಞಾನ ಶಿಕ್ಷಕರುಗಳು ಭಾಗವಹಿಸಿದ್ದರು. ಸಹ ಶಿಕ್ಷಕಿ ಶ್ರೀಮತಿ ವೀಣಾ ನಡೆಸಿಕೊಟ್ಟ ಕಾರ್ಯಕ್ರಮದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಸಿಬಿಎಸ್ಸಿ ಉಜಿರೆ ಇದರ ಮುಖ್ಯೋಪಾಧ್ಯಾಯರಾಗಿರುವ ಶ್ರೀಯುತ ಮನಮೋಹನ್ ನಾಯಕ್ ಸ್ವಾಗತಿಸಿದರು.

ಶಾಲೆಯ ಪ್ರಾರಂಭಕ್ಕೂ ಮುನ್ನ ನಡೆಸಿದಂತಹ ಈ ಕಾರ್ಯಗಾರ ಶಿಕ್ಷಕರುಗಳಲ್ಲಿ ಹೊಸ ಚೈತನ್ಯ ಹಾಗೂ ಉತ್ಸಾಹವನ್ನು ಮೂಡಿಸಿತು ಎಂದು ಅಲ್ಲಿ ನೆರೆದ ಶಿಕ್ಷಕ ವೃಂದದ ಅಭಿಪ್ರಾಯವಾಗಿತ್ತು.

Related post

Leave a Reply

Your email address will not be published. Required fields are marked *

error: Content is protected !!