ಕರೆಂಟ್ ಬಿಲ್ ಬಂದರೆ ಸರ್ಕಾರಕ್ಕೆ ಕಳುಹಿಸಿ: ರಾಜ್ಯದ ಜನತೆಗೆ ಕರೆ ನೀಡಿದ ಸಿ.ಟಿ ರವಿ
ಉಚಿತ ವಿದ್ಯುತ್ ಪೂರೈಕೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಜನತೆಗೆ ಒದಗಿಸುವ ಭರವಸೆ ನೀಡುವ ಮೂಲಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಗೆ ಅದರ ಈಡೇರಿಕೆ ಕುರಿತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸವಾಲು ಹಾಕಿದ್ದಾರೆ.
ಯಾರೂ ವಿದ್ಯುತ್ ಬಿಲ್ ಕಟ್ಬೇಡಿ, ಬಿಲ್ ಬಂದರೆ ಮುಖ್ಯಮಂತ್ರಿಗೆ ಕಳುಹಿಸಿ ಎಂದು ಅವರು ರಾಜ್ಯದ ಜನತೆಗೆ ಕರೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದೇ ದಿನಕ್ಕೆ ಕಾಂಗ್ರೆಸ್‌ನವರು ಬಣ್ಣ ಬದಲಾಯಿಸಿದ್ದಾರೆ. ಇನ್ನು ದಿನ ಕಳೆದಂತೆ ಯಾವೆಲ್ಲ ಬಣ್ಣ ಬದಲಾಯಿಸ್ತಾರೋ ನೋಡಬೇಕು. ಮೊದಲು ಎಲ್ಲಾ ಪದವೀಧರ ನಿರುದ್ಯೋಗಿಗಳಿಗೂ 3 ಸಾವಿರ ರೂ. ಕೊಡ್ತೀವಿ ಅಂದಿದ್ರು. ಈಗ 2022-23ರ ಸಾಲಿನ ಪದವೀಧರರಿಗೆ ಮಾತ್ರ ಅಂತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಮಹಿಳೆಯರಿಗೆ ಉಚಿತ ಬಸ್‌ಪಾಸ್, ಗೃಹಿಣಿಯರಿಗೆ 2 ಸಾವಿರ ರೂ., ಉಚಿತ ವಿದ್ಯುತ್ ಕೊಡಲೇಬೇಕು. ಕಾಂಗ್ರೆಸ್ ನವರು ಪ್ರಣಾಳಿಕೆಯಲ್ಲಿ ಹೇಳಿದ ಎಲ್ಲಾ ಗ್ಯಾರಂಟಿಗಳನ್ನು ಜಾರಿಗೊಳಿಸಲೇಬೇಕು ಎಂದು ಒತ್ತಾಯಿಸಿದರು. ಜನರು ಯಾರೂ ವಿದ್ಯುತ್ ಬಿಲ್ ಕಟ್ಟಬಾರದು, ಬಿಲ್ ಬಂದರೆ ಮುಖ್ಯಮಂತ್ರಿ ಹೇಳಿದ್ದಾರೆ ಎಂದು ಅವರಿಗೆ ಕಳುಹಿಸಬೇಕು ಎಂದು ಹೇಳಿದ್ದಾರೆ.