ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರ ಮೇಲೆ ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ನಿಂದ ಪೋಲಿಸ್ ಠಾಣೆಗೆ ದೂರು
ಬೆಳ್ತಂಗಡಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಮೇ ರಂದು ಬೆಳ್ತಂಗಡಿಯ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಂಗಣದಲ್ಲಿ ಬಿಜೆಪಿ ಪಕ್ಷದ ವತಿಯಿಂದ ನಡೆದ ಅಭಿನಂದನ ಕಾರ್ಯಕ್ರಮದ ಭಾಷಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಬಗ್ಗೆ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆಂದು ಆರೋಪಿಸಿ ಇವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಘಟಕದ ವತಿಯಿಂದ ಇಂದು ಬೆಳ್ತಂಗಡಿ ಪೋಲಿಸ್ ಠಾಣೆಯಲ್ಲಿ ದೂರು ನೀಡಿದರು.
ಈ ಸಂದರ್ಭದಲ್ಲಿ ಅಧ್ಯಕ್ಷರಾದ ಶ್ರೀಮತಿ ನಮಿತ ಕೆ ಪೂಜಾರಿ ಉಪಾಧ್ಯಕ್ಷರಾದ ಶ್ರೀಮತಿ ಮಮತಾ ,ಪ್ರಧಾನ ಕಾರ್ಯದರ್ಶಿ ಸುಮಂಗಳ ನಾಯ್ಕ್ ,ಕಾರ್ಯದರ್ಶಿ ಶ್ರೀಮತಿ ಸಿಂಧೂ ಡಿನ್ನಿಸ್, ಶ್ರೀಮತಿ ರೇವತಿ ಉಜಿರೆ ಸದಸ್ಯರಾದ ಕಸ್ತೂರಿ ಪೂಜಾರಿ ,ಶ್ರೀಮತಿ ಕುಸುಮ ಮಾಚಾರು ಉಪಸ್ಥಿತರಿದ್ದರು.