ಬೆಳ್ತಂಗಡಿ: ಹರೀಶ್ ಪೂಂಜರು ಹೇಳಿದ ವಿವಾದಾದ್ಮಕ ಹೇಳಿಕೆಗೆ ಎಫ್ ಐ ಆರ್ ದಾಖಲಿಸಲಾಗಿದೆ: ಹರೀಶ್ ಪೂಂಜ ಮತದಾರರಿಗೆ ಹೇರಳವಾಗಿ ಹಣ, ಹಂಚಿ ವಿಜೇತರಾಗಿದ್ದು: ಪತ್ರಿಕಾಗೋಷ್ಠಿಯಲ್ಲಿ ಗುಡಿಗಿದ ವಸಂತ ಬಂಗೇರ
ಬೆಳ್ತಂಗಡಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಮುಖ್ಯಮಂತ್ರಿ ಸಿದ್ದರಾಮಯ್ಯರವರು 24 ಹಿಂದೂ ಕಾರ್ಯಕರ್ತರನ್ನು ಕೊಂದಿದ್ದಾರೆ. ಎನ್ನುವಂತಹ ಮಾತನ್ನು ಸಾರ್ವಜನಿಕವಾಗಿ ಹೇಳಿದ್ದು, ಇದನ್ನು ನಾನು ಬಲವಾಗಿ ಖಂಡಿಸುತ್ತೇನೆ. ಈ ಬಗ್ಗೆ ನಮ್ಮ ಕಾರ್ಯಕರ್ತರು ಪೊಲೀಸರಿಗೆ ದೂರು ನೀಡಿದ್ದು, ಶಾಸಕ ಹರೀಶ್ ಪೂಂಜ ಮತ್ತು ಬಿಜೆಪಿ ಮಂಡಲಾಧ್ಯಕ್ಷ ಜಯಂತ್ ಕೋಟ್ಯಾನ್ ವಿರುದ್ಧ ಬೆಳ್ತಂಗಡಿ ಠಾಣಾಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆಂದು ಮಾಜಿ ಶಾಸಕ ವಸಂತ ಬಂಗೇರ ಮಾತನಾಡಿದರು.
ಅವರು ಮೇ. 25 ರಂದು ಬೆಳ್ತಂಗಡಿ ಗುರುನಾರಾಯಣ ಸಭಾಭವನದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಕರ್ನಾಟಕ ಮುಖ್ಯಮಂತ್ರಿಯಾಗಿ 2ನೇ ಬಾರಿ ಅಧಿಕಾರ ವಹಿಸಿಕೊಂಡ ಸಿದ್ದರಾಮಯ್ಯರವರಿಗೆ ಮತ್ತು ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಬೆಳ್ತಂಗಡಿಯ ಜನತೆಯ ಪರವಾಗಿ ಅಭಿನಂದನೆಯನ್ನು ಸಲ್ಲಿಸುತ್ತೇನೆ. ಕಾಂಗ್ರೆಸ್ ಪಕ್ಷ ನೀಡಿರುವ ಐದು ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ಈಗಾಗಲೆ ಮುಖ್ಯಮಂತ್ರಿಗಳು ಆದೇಶ ನೀಡಿದ್ದಾರೆ. ಹಾಗಾಗಿ ಈ ಬಗ್ಗೆ ಯಾರು ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮತದಾರರಿಗೆ ಹೇರಳವಾಗಿ ಹಣ, ಹೆಂಡ ಹಂಚಿ ವಿಜೇತರಾಗಿದ್ದು , ಚುನಾವಣಾಧಿಕಾರಿಗಳು ಕೆಲ ಕಂದಾಯ ಅಧಿಕಾರಿಗಳು ಪೊಲೀಸ್ ಇಲಾಖಾಧಿಕಾರಿಗಳು ಹರೀಶ್ ಪೂಂಜರ ಜೊತೆ ಶಾಮಿಲಾಗಿ ಈ ಅಕ್ರಮವನ್ನು ತಡೆಯುವಲ್ಲಿ ವಿಫಲರಾಗಿದ್ದಾರೆ. ಬೆಳ್ತಂಗಡಿ ಯ ಕೆಲ್ಲಗುತ್ತುವಿನಲ್ಲಿ ಹಣ ಹಂಚುವಾಗ ನಗರವಪಂಚಾಯತ್ ಉಪಾಧ್ಯಕ್ಷ ಜಯಾನಂದ ಗೌಡ, ಸದಸ್ಯ ಶರತ್ಚಶೆಟ್ಟಿ ಮತ್ತು ಸಂಕೇತ್ ಶೆಟ್ಟಿ ಎಂಬವರುಗಳು ನಮ್ನ ಕಾರ್ಯಕರ್ತರ ಕೈಗೆ ಸಿಕ್ಕಿಬಿದ್ದಿದ್ದು, ನಂತರ ನಾನು ಅಲ್ಲಿಗೆ ತೆರಳಿ ಜಪ್ತಿ ಮಾಡಿರುತ್ತಾರೆ. ಅಂತಹ ದುಸ್ಸಾಹಸಕ್ಕೆ ಪೊಲೀಸರು ಕೈ ಹಾಕದಂತೆ ಎಚ್ಚರಿಕೆ ನೀಡಿದರು.
ಬಿಜೆಪಿ ವಿಜಯೋತ್ಸವದ ವೇಳೆ ತಾಲೂಕಿನ ಹಲವಾರು ಕಾಂಗ್ರೆಸ್ ಕಾರ್ಯಕರ್ತರ ಅಂಗಳದಲ್ಲಿ ಪಟಾಕಿಸಿಡಿಸಿ ಅಸಭ್ಯವಾಗಿ ವರ್ತಿಸಿದ್ದಾರೆ. ರಕ್ಷಿತ್ ಶಿವರಾಂ ನಾಮಪತ್ರ ಸಲ್ಲಿಸುವ ಮೆರವಣಿಗೆಗೆ ಹರೀಶ್ ಪೂಂಜ ಬೆಂಬಲಿಗರು ವಿನಾಕಾರಣ ಅತ್ತಿದ್ರಿಂದ ಓಡಾಡಿದ ಬಗ್ಗೆ ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದೆವು. ಆದರೆ ಪೊಲೀಸರು ಈ ವಿಷಯವನ್ನು ಕೈಬಿಟ್ಟಿದ್ದಾರೆ ಎಂದು ಗುಡುಗಿದರು.
ಪತ್ರಿಕಾಗೋಷ್ಠಿಯಲ್ಲಿ ಲಾಯರ್ ಮನೋಹರ್ ಆಟಲ್ ಉಪಸ್ಥಿತರಿದ್ದರು.