ಡಾlಎಂ.ಎನ್. ರಾಜೇಂದ್ರ ಕುಮಾರ್ ಗೆ ‘ಮದರ್ ತೆರೇಸಾ ಮೆಮೋರಿಯಲ್ ನ್ಯಾಷನಲ್ ಅವಾರ್ಡ್’
ನ್ಯಾಷನಲ್ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಹಾಗೂ ದಿ ನ್ಯೂಸ್ ಪೇಪರ್ಸ್ ಅಸೋಷಿಯೇಷನ್ ಆಫ್ ಕರ್ನಾಟಕ-ಬೆಂಗಳೂರು ವತಿಯಿಂದ ನೀಡಲಾಗುವ ಪ್ರತಿಷ್ಠಿತ ‘ಮದರ್ ತೆರೇಸಾ ಮೆಮೋರಿಯಲ್ ನ್ಯಾಷನಲ್ ಅವಾರ್ಡ್’ ಗೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಂಡಳದ ಅಧ್ಯಕ್ಷ ಡಾl ಎಂ ಎನ್ ರಾಜೇಂದ್ರ ಕುಮಾರ್ ಆಯ್ಕೆಗೊಂಡಿದ್ದಾರೆ.
ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಜೂ 6ರಂದು ನಡೆಯುವ ಅಂತಾರಾಷ್ಟ್ರೀಯ ದಾದಿಯರ ದಿನಾಚರಣೆ ಸಂದರ್ಭ ಪ್ರಶಸ್ತಿ ಪ್ರಧಾನ ನಡೆಯಲಿದೆ.