ಕರಾಯ: ಹೆರಿಗೆ ವೇಳೆ ರಕ್ತಸ್ರಾವದಿಂದ ತಾಯಿ ಮೃತಪಟ್ಟ ಬೆನ್ನಲ್ಲೇ ಮಗು ಸಾವು
ಕರಾಯ: ಹೆರಿಗೆ ವೇಳೆ ಹಿರೇಬಂಡಾಡಿ ಗ್ರಾಮದ ಆಶಾ ಕಾರ್ಯಕರ್ತೆ ಭವ್ಯ ಮೊನ್ನೆ ಹೆರಿಗೆ ವೇಳೆ ರಕ್ತಸ್ರಾವದಿಂದ ಮೃತಪಟ್ಟಿದ್ದ ಬೆನ್ನಿಗೆ ಅವರ ಹಸುಗೂಸು ಗುರುವಾರ ಮುಂಜಾನೆ ಮೃತಪಟ್ಟಿದೆ ಎನ್ನಲಾಗಿದೆ.
ಭವ್ಯ ಅವರು ಕಳೆದ ಮಂಗಳವಾರ ರಾತ್ರಿ ಗಂಡು ಮಗುವಿಗೆ ಜನ್ಮ ನೀಡಿದ್ದು, ಹೆರಿಗೆಯಾಗುತ್ತಲೇ ರಕ್ತಸ್ರಾವ ಉಂಟಾಗಿ ಸಾವನ್ನಪ್ಪಿದ್ದಾರೆ. ಜನಿಸಿದ ಗಂಡು ಮಗುವನ್ನು ಮಂಗಳೂರಿನ ಸರಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮುಂಜಾನೆ ಮಗು ಮೃತಪಟ್ಟಿದೆ ಎನ್ನಲಾಗಿದೆ