ಬೆಳ್ತಂಗಡಿ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಪಡಂಗಡಿ ಗ್ರಾಮದಲ್ಲಿ ಎನ್ ಐಎ ದಾಳಿ
ಬೆಳ್ತಂಗಡಿ: ಸುಳ್ಯ ತಾಲೂಕಿನ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧಿಸಿ ಜೂನ್ 27 ರಂದು ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಪೊಯ್ಯಗುಡ್ಡೆ ನಿವಾಸಿ ನೌಷದ್ ಎಂಬಾತನ ಮನೆ ಮೇಲೆ ಎನ್ ಐಎ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ನೌಷದ್ ಮನೆಯಲ್ಲಿ ಇಲ್ಲದ ಕಾರಣ ಅಧಿಕಾರಿಗಳು ಎನ್ ಐಎ ಕಚೇರಿಗೆ ಹಾಜರಾಗಲು ನೌಷದ್ ಗೆ ನೋಟಿಸ್ ನೀಡಿ ಅಲ್ಲಿಂದ ತೆರಳಿದ್ದಾರೆ ಎಂದು ವರದಿಯಾಗಿದೆ.