ವೇಣೂರು ಗ್ರಾ.ಪಂ ಗ್ರಾಮ ಸಭೆ: ಬಜಿರೆ ಶಾಲೆಯ 8ನೇ ತರಗತಿ ವಿದ್ಯಾರ್ಥಿಗಳು ಭಾಗಿ
ವೇಣೂರು: ವೇಣೂರು ಗ್ರಾ.ಪಂ 2023-24 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷ ನೇಮಯ್ಯ ಕುಲಾಲ್ ಅವರ ಅಧ್ಯಕ್ಷತೆಯಲ್ಲಿ ವೇಣೂರು ನೂತನ ಬಸ್ ತಂಗುದಾಣದ ಸಭಾಭವನದಲ್ಲಿ ಜು.1 ರಂದು ನಡೆಯಿತು.
ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ಪಶು ವೈದ್ಯಕೀಯ ಇಲಾಖೆಯ ಸಹಾಯಕ ನಿರ್ದೇಶಕ ಮಂಜಯ್ಯ ನಾಯ್ಕ್ ಗ್ರಾಮಸಭೆಯನ್ನು ಮುನ್ನಡೆಸಿದರು. ವೇಣೂರು ಪೇಟೆಯ ಎಲ್ಲಾ ಅಂಗಡಿಗಳಿಗೆ ಗ್ರಾಮಸಭೆಯ ನೋಟೀಸ್ ನೀಡುವಂತೆ ಗ್ರಾಮಸ್ಥರು ಒತ್ತಾಯಿಸಿದರು. ವಿಶೇಷವಾಗಿ ಬಜಿರೆ ಶಾಲೆಯ 8ನೇ ತರಗತಿ ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕಲಾಪ ವೀಕ್ಷಣೆ ಮಾಡಿದರು ಹಾಗೂ ಗ್ರಾಮೀಣ ಭಾಗದ ಅಭಿವೃದ್ಧಿ ಯ ದೃಷ್ಟಿಯಿಂದ ಹಲವಾರು ಚರ್ಚೆಗಳು ನಡೆದವು.