ಭಾರೀ ಮಳೆ ಹಿನ್ನೆಲೆ: ದ.ಕ ಜಿಲ್ಲೆಯ ಐದು ತಾಲೂಕುಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 5 ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.
ಇನ್ನುಳಿದ ಕಡೆಗಳಲ್ಲಿ ಪ್ರಸ್ತುತ ಪರಿಸ್ಥಿತಿಗಳನ್ನು ನೋಡಿಕೊಂಡು ರಜೆ ಘೋಷಿಸುವ ಅಧಿಕಾರವನ್ನು ಆಯಾ ತಹಶೀಲ್ದಾರ್ ಗಳಿಗೆ ನೀಡಲಾಗಿದೆ.