• June 16, 2024

ಬೆಳ್ತಂಗಡಿ: ದ.ಕ ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನೆಲೆ: ನಾಳೆಯೂ(ಜುಲೈ.6) ರಂದು ಶಾಲಾ ಕಾಲೇಜುಗಳಿಗೆ ರಜೆ

 ಬೆಳ್ತಂಗಡಿ: ದ.ಕ ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನೆಲೆ: ನಾಳೆಯೂ(ಜುಲೈ.6) ರಂದು ಶಾಲಾ ಕಾಲೇಜುಗಳಿಗೆ ರಜೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜು.6 ರಂದು ಆರೆಂಜ್ ಅಲರ್ಟ್ ಘೋಷಣೆಯಾಗಿದ್ದು, ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ದ.ಕ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ತುರ್ತು ಕ್ರಮಗಳನ್ನು ಕೈಗೊಂಡಿದೆ.

ದ.ಕ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆ ಗಳಿಗೆ ಜು.6 ರಂದು ರಜೆ ಘೋಷಿಸಲಾಗಿದೆ.

Related post

Leave a Reply

Your email address will not be published. Required fields are marked *

error: Content is protected !!