ಪ್ರತೀ ತಿಂಗಳ ಮೂರನೇ ಶನಿವಾರ ಮಕ್ಕಳಿಗೆ ಬ್ಯಾಗ್ ರಹಿತ ದಿನ ಆಚರಣೆ
ಬೆಳ್ತಂಗಡಿ: ಶಾಲಾ ಮಕ್ಕಳಿಗೆ ವಾರದಲ್ಲಿ ಒಂದು ದಿನ ಬ್ಯಾಗ್ ರಹಿತವಾಗಿ ಖುಷಿಯಿಂದ ಕಲಿಯುವ ವಾತಾವರಣ ನಿರ್ಮಿಸುವ ಉದ್ದೇಶದಿಂದ ರಾಜ್ಯದ ಶಾಲೆಗಳಲ್ಲಿ ಪ್ರತಿ ತಿಂಗಳ 3 ನೇ ಶನಿವಾರವನ್ನು ಬ್ಯಾಗ್ ರಹಿತ ದಿನ ಅಥವಾ ಸಂಭ್ರಮ ಶನಿವಾರ ಕಾರ್ಯಕ್ರಮ ನಡೆಸುವಂತೆ ಶಿಕ್ಷಣ ಇಲಾಖೆಯು ಸೂಚನೆ ನೀಡಿದೆ.
ಮಕ್ಕಳಿಗೆ ಸಂತಸದಾಯಕ ಕಲಿಕೆಯನ್ನು ನೀಡಲು ಹಾಗೂ ಮಕ್ಕಳಿಗೆ ಪಠ್ಯವನ್ನು ಉಲ್ಲಾಸದಿಂದ ಹೊರೆಯಾಗಿಸದೆ ಕಲಿಯುವಂತೆ ಮಾಡುವ ಉದ್ದೇಶದಿಂದ ಪ್ರತೀ ತಿಂಗಳು ಒಂದು ಶನಿವಾರದಂದು ಬ್ಯಾಗ್ ರಹಿತ ದಿನವೆಂದು ಆಚರಿಸುವಂತೆ ಆದೇಶಿಸಲಾಗಿದೆ