• September 12, 2024

ಹತ್ಯೆಯಾದ ಪ್ರವೀಣ್ ನೆಟ್ಟಾರು ಮನೆಗೆ ಆಗಮಿಸಲು ದ.ಕ ಜಿಲ್ಲೆಗೆ ಪ್ರವೇಶಿಸಿದಾಗ ಪ್ರಮೋದ್ ಮುತಾಲಿಕ್ ಪೊಲೀಸ್ ವಶ

 ಹತ್ಯೆಯಾದ ಪ್ರವೀಣ್ ನೆಟ್ಟಾರು ಮನೆಗೆ ಆಗಮಿಸಲು ದ.ಕ ಜಿಲ್ಲೆಗೆ ಪ್ರವೇಶಿಸಿದಾಗ ಪ್ರಮೋದ್ ಮುತಾಲಿಕ್ ಪೊಲೀಸ್ ವಶ

ದಕ್ಷಿಣ ಕನ್ನಡ ಜಿಲ್ಲಾ ಪ್ರವೇಶಕ್ಕೆ ಪ್ರಮೋದ್ ಮುತಾಲಿಕ್ ಪ್ರಯತ್ನಿಸುತ್ತಿದ್ದು ಇದೀಗ ಪೊಲೀಸರು ತಡೆದು ವಶಕ್ಕೆ ಪಡೆದ ಘಟನೆ ನಡೆದಿದೆ

ಉಡುಪಿಯಿಂದ ಮಂಗಳೂರಿಗೆ ಬರುತ್ತಿದ್ದಾಗ ಉಡುಪಿ ಮಂಗಳೂರು ಗಡಿ ಭಾಗದ ಹೆಜಮಾಡಿಯಲ್ಲಿ ಪ್ರಮೋದ್ ಮುತಾಲಿಕ್ ಅವರನ್ನು ಪೊಲೀಸ್ ವಶಕ್ಕೆ ಪಡೆದಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯ ಬಂಟ್ವಾಳ ಬೆಳ್ತಂಗಡಿ ,ಪುತ್ತೂರು, ಕಡಬ ಮತ್ತು ಸುಳ್ಯ ತಾಲೂಕುಗಳಲ್ಲಿ ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಪ್ರವೇಶಕ್ಕೆ ನಿಷೇಧ ಹೇರಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ ವಿ ಆದೇಶಿಸಿದ್ದರು

ಜಿಲ್ಲೆಯ ಪ್ರಸ್ತುತ ವಿದ್ಯಮಾನಗಳನ್ನು ಗಣನೆಗೆ ತೆಗೆದುಕೊಂಡು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಳ್ಳುವ ಸಲುವಾಗಿ ಕ್ರಮ ತೆಗೆದುಕೊಳ್ಳುವುದಾಗಿ ಅಗತ್ಯವಾಗಿದೆ ಈ ಹಿನ್ನೆಲೆಯಲ್ಲಿ ಪ್ರಮೋದ್ ಮುತಾಲಿಕ್ ಅವರ ದ.ಕ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಪ್ರವೇಶಕ್ಕೆ ಜು.28 ರಿಂದ ಮುಂದಿನ ಆದೇಶದವರೆಗೆ ನಿಷೇಧ ಜಾರಿಯಲ್ಲಿರುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದರು. ಹತ್ಯೆಯಾದ ಬಿಜೆಪಿ ಮುಖಂಡ ಪ್ರವೀಣ್ ಮನೆಗೆ ಆಗಮಿಸುತ್ತಿದ್ದಾಗ ಮುತಾಲಿಕ್ ಅವರ ಬಂಧನವಾಗಿದೆ.

Related post

Leave a Reply

Your email address will not be published. Required fields are marked *

error: Content is protected !!