• November 21, 2024

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಚೆಂಡಿನಗದ್ದೆಯಲ್ಲಿ ಸುಮಾರು 2.50 ಎಕರೆ ಗದ್ದೆಯಲ್ಲಿ 5 ನೇ ವರ್ಷದ ಯಾಂತ್ರೀಕೃತ ಭತ್ತ ನಾಟಿಗೆ ಶಾಸಕ ರಾಜೇಶ್ ಯಂತ್ರದ ಮೂಲಕ ನೇಜಿ ನೆಟ್ಟು ಚಾಲನೆ

 ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಚೆಂಡಿನಗದ್ದೆಯಲ್ಲಿ ಸುಮಾರು 2.50 ಎಕರೆ ಗದ್ದೆಯಲ್ಲಿ 5 ನೇ ವರ್ಷದ ಯಾಂತ್ರೀಕೃತ ಭತ್ತ ನಾಟಿಗೆ ಶಾಸಕ ರಾಜೇಶ್ ಯಂತ್ರದ ಮೂಲಕ ನೇಜಿ ನೆಟ್ಟು ಚಾಲನೆ

 

ಬಂಟ್ವಾಳ ಕೃಷಿ ಇಲಾಖೆ ವತಿಯಿಂದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಮುತುವರ್ಜಿಯಲ್ಲಿ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಚೆಂಡಿನಗದ್ದೆಯಲ್ಲಿ ಸುಮಾರು 2.50 ಎಕರೆ ಗದ್ದೆಯಲ್ಲಿ 5 ನೇ ವರ್ಷದ ಭದ್ರತಳಿಯ
ಯಾಂತ್ರೀಕೃತ ಭತ್ತ ನಾಟಿಗೆ ಶಾಸಕ ರಾಜೇಶ್ ಯಂತ್ರದ ಮೂಲಕ ನೇಜಿ ನೆಟ್ಟು ಚಾಲನೆ ನೀಡಿದರು.


ಈ ಸಂದರ್ಭದಲ್ಲಿ ಮಾತನಾಡಿದ ಅವರು ಕೃಷಿ ಇಲಾಖೆ ಹಾಗೂ ಊರಿನವರ ಸಹಕಾರದಿಂದ ಭತ್ತದ ಕೃಷಿ ನಾಟಿಯನ್ನು ಮಾಡಲಾಗಿದೆ. ಕಳೆದ ಬಾರಿ ಮಾಡಿದ ಕೃಷಿಯ ಮೂಲಕ 95 ಸಾವಿರದಷ್ಟು ದೇವಸ್ಥಾನಕ್ಕೆ ಉಳಿತಾಯವಾಗಿದ್ದು, ಇದರ ಹುಲ್ಲು ಸ್ಥಳೀಯ ಅನೇಕ ಕೃಷಿಕರಿಗೆ ಉಪಯೋಗವಾಗಿದೆ ಎಂದು ತಿಳಿಸಿದರು.
ಭತ್ತದ ಕೃಷಿಯಿಂದ ಹೆಕ್ಟೇರ್ ಗೆ 80 ಸಾವಿರ ರೂ ಲಾಭ ಗಳಿಸುವುದು ನಿಜಕ್ಕೂ ಉತ್ತಮ ಆದಾಯ ಎಂದು ಹೇಳಿದ ಅವರು ಭತ್ತದ ಕೃಷಿ ಲಾಭದಾಯಕ ಕೃಷಿ ಎಂಬುದನ್ನು ಸೂಚಿಸುತ್ತದೆ, ಇದರಿಂದ ಇನ್ನಷ್ಟು ಭತ್ತದ ಕೃಷಿ ಚಟುವಟಿಕೆಗೆ ಉತ್ತೇಜನ ನೀಡುತ್ತದೆ ಎಂದರು.


ಇದೇ ಸಂದರ್ಭ ಮೂರು ಜನ ರೈತರಿಗೆ ಮಣ್ಣು ಆರೋಗ್ಯ ಚೀಟಿ ವಿತರಣೆ ನಡೆಸಲಾಯಿತು.

ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿ ಸುದರ್ಶನ ಬಜ, ಪ್ರಮುಖರಾದ ವೆಂಕಟೇಶ ನಾವಡ, ಸುಕೇಶ್ ಚೌಟಕಾರ್ತಿಕ್ ಬಲ್ಲಾಳ್, ಚಂದ್ರಶೇಖರ್ ಶೆಟ್ಟಿ, ಯಶವಂತ ಪೊಳಲಿ, ಚಂದ್ರಾವತಿ ಪೊಳಲಿ,ಯಶೋಧ ಕಲ್ಕುಟ್ಟ, ಲೋಕೇಶ್ ಭರಣಿ,ನವೀನಗ ಕಟ್ಟಪುಣಿ,
ಜಂಟಿ ಕೃಷಿ ನಿರ್ದೇಶಕ ಕೆಂಪೇಗೌಡ, ಉಪನಿರ್ದೇಶಕಿ ಕುಮುದ, ಸಹಾಯಕ ಕೃಷಿ ನಿರ್ದೇಶಕಿ ವೀಣಾ, ಕೃಷಿ ಅಧಿಕಾರಿ ನಂದನ್ ಶೆಣೈ, ತಾಂತ್ರಿಕ ಅಧಿಕಾರಿ ಹನುಮಂತ ಕಾಳಗಿ ಉಪಸ್ಥಿತರಿದ್ದರು.

Related post

Leave a Reply

Your email address will not be published. Required fields are marked *

error: Content is protected !!