ಶಾಲೆಗಳಲ್ಲಿ ಹಿಂದೂ ಹಬ್ಬಗಳ ಆಚರಣೆಗೆ ರಾಜ್ಯ ಸರ್ಕಾರ ನಿರ್ಭಂಧ ಖಂಡಿಸಿ ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಜುಲೈ 22 ರಂದು ಬೃಹತ್ ಪ್ರತಿಭಟನೆ
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಕರ್ನಾಟಕ ರಾಜ್ಯಾದ್ಯಂತ ಶಾಲೆಗಳ ಮೈದಾನಗಳಲ್ಲಿ ಅನೇಕ ವರ್ಷಗಳಿಂದ ನಿರಂತರವಾಗಿ ಸಾರ್ವಜನಿಕವಾಗಿ ನಡೆಯುತ್ತ ಬಂದಿರುವ ಗಣೇಶೋತ್ಸವ, ಶಾರದೋತ್ಸವ, ಮೊಸರು ಕುಡಿಕೆ ಸಹಿತ ಹಿಂದೂ ಹಬ್ಬಗಳ ಆಚರಣೆಯನ್ನು ನಿರ್ಭಂಧಿಸುವ ಆದೇಶವನ್ನು ಹೊರಡಿಸಿರುವ ರಾಜ್ಯ ಸರ್ಕಾರದ ನಿಲುವನ್ನು ಖಂಡಿಸಿ ಬೆಳ್ತಂಗಡಿ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಜುಲೈ 22 ರಂದು ಬೃಹತ್ ಪ್ರತಿಭಟನೆ ನಡೆಯಲಿದ್ದು, ಅತ್ಯಧಿಕ ಸಂಖ್ಯೆಯಲ್ಲಿ ಸೇರಿ ಭಜನೆಯ ಮೂಲಕ ಪ್ರತಿಭಟನಾ ಕಾರ್ಯಕ್ರಮವು ನಡೆಯಲಿರುವುದಾಗಿ ಪ್ರಕಟನೆಯಲ್ಲಿ ತಿಳಿಸಲಾಗಿದೆ