ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ವಸತಿ ಮತ್ತು ವಾಣಿಜ್ಯ ಸಂಬಂಧ ಭೂ ಪರಿವರ್ತನೆ ಜಮೀನುಗಳ ಏಕ ವಿನ್ಯಾಸ ನಕ್ಷೆಗಳಿಗೆ ಆಯಾ ಗ್ರಾಮ ಪಂಚಾಯತ್ ಗಳಲ್ಲಿಯೆ ಅನುಮೋದನೆ ನೀಡುವಂತೆ ಶಾಸಕರುಗಳಿಂದ ಮನವಿ
ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ವಸತಿ ಮತ್ತು ವಾಣಿಜ್ಯ ಸಂಬಂಧ ಭೂ ಪರಿವರ್ತನೆ ಜಮೀನುಗಳ ಏಕ ವಿನ್ಯಾಸ 9/11 ನಕ್ಷೆಗಳಿಗೆ ಆಯಾ ಗ್ರಾಮ ಪಂಚಾಯತ್ ಗಳಲ್ಲಿಯೆ ಅನುಮೋದನೆ ನೀಡುವ ಕುರಿತು ಸಭಾಧ್ಯಕ್ಷರ ಕಚೇರಿಯಲ್ಲಿ ಮಾನ್ಯ ಕಂದಾಯ ಸಚಿವರಿಗೆ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಹಾಗೂ ಉಡುಪಿ ಜಿಲ್ಲೆಯ ಶಾಸಕರೆಲ್ಲರೂ ಈ ಸಭೆಯಲ್ಲಿ ಜನಸಾಮಾನ್ಯರಿಗೆ ಉಂಟಾಗುತ್ತಿರುವ ಸಮಸ್ಯೆಯ ಕುರಿತು ತಿಳಿಸಿ ತಕ್ಷಣ ಈ ಸಮಸ್ಯೆಯನ್ನು ಪರಿಹರಿಸುವಂತೆ ಮನವಿ ಮಾಡಲಾಯಿತು.