• October 22, 2024

ಶ್ರೀ.ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಶಾಲಾ ಮಟ್ಟದ ಪ್ರತಿಭಾ ಕಾರಂಜಿ.

 ಶ್ರೀ.ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಶಾಲಾ ಮಟ್ಟದ ಪ್ರತಿಭಾ ಕಾರಂಜಿ.

 

ಧರ್ಮಸ್ಥಳ: ಶ್ರೀ.ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಶಾಲಾ ಮಟ್ಟದ ಪ್ರತಿಭಾ ಕಾರಂಜಿಯನ್ನು ಇಂದು ಶಾಲಾ ವಠಾರದಲ್ಲಿ ಆಯೋಜಿಸಲಾಯಿತು.

ಈ ಸ್ಪರ್ಧೆಯನ್ನು ಶಂಕರ ರಾಮ ಕಾರಂತ,ಶ್ರೀ. ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಉಜಿರೆ ಇಲ್ಲಿನ ಶಿಕ್ಷಕರಾದ ರವಿಚಂದ್ರ ಹಾಗೂ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರಾಥಮಿಕ ಶಾಲೆ, ಧರ್ಮಸ್ಥಳ ಇಲ್ಲಿನ ನಿವೃತ್ತ ಶಿಕ್ಷಕಿ ಮನೋರಮಾ ತೊಳ್ಪಾಡಿತ್ತಾಯ ಜೊತೆಗೂಡಿ ದೀಪ ಪ್ರಜ್ವಲನೆಯೊಂದಿಗೆ ಉದ್ಘಾಟಿಸಿ ಶುಭ ಹಾರೈಸಿದರು.

ಶಾಲೆಯ ವಿವಿಧ ವರ್ಗ ಕೋಣೆಗಳಲ್ಲಿ ಪ್ರತಿಭಾ ಕಾರಂಜಿಯಲ್ಲಿ ಇರುವಂತಹ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಯಿತು.

ಶಾಲಾ ಹಂತದಲ್ಲಿ ಆಯೋಜಿಸಿರುವ ಈ ಸ್ಪರ್ಧೆಯಲ್ಲಿ ಆಯ್ಕೆಗೊಂಡಂತಹ ವಿದ್ಯಾರ್ಥಿಗಳನ್ನು ಮುಂದಿನ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗೆ ಆಯ್ಕೆ ಮಾಡಿ ಕಳುಹಿಸಲಾಗುತ್ತದೆ. ವಿದ್ಯಾರ್ಥಿಗಳೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಈ ಸ್ಪರ್ಧೆಯಲ್ಲಿ ಪಾಲ್ಗೊಂಡು ತಮ್ಮ ತಮ್ಮ ಪ್ರತಿಭೆಗಳನ್ನು ಪ್ರದರ್ಶಿಸಿದರು.

ಶಾಲಾ ಸಹ ಶಿಕ್ಷಕರಾದ ಶ್ರೀಮತಿ ಕಾವ್ಯ ಹಾಗೂ ಅಂಜು ರೂಪಿಸಿದ ಕಾರ್ಯಕ್ರಮದಲ್ಲಿ, ಶ್ರೀಮತಿ ದೀಕ್ಷಾ ಸ್ವಾಗತಿಸಿ, ಶ್ರೀಯುತ ಕಾರ್ತಿಕೇಶ್ ಅತಿಥಿಗಳ ಕಿರು ಪರಿಚಯವನ್ನು ನೀಡಿ, ಶ್ರೀಮತಿ ಸೌಮ್ಯ ವಂದಿಸಿದರು.

ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಪರಿಮಳ ಎಂ ವಿ, ಶಾಲಾ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳ ಹೆತ್ತವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related post

Leave a Reply

Your email address will not be published. Required fields are marked *

error: Content is protected !!