• November 21, 2024

ಕೊಕ್ಕಡ: ಸೆಲ್ಕೋ ಫೌಂಡೇಶನ್ ನಿಂದ 25 ಮಂದಿ ಅರ್ಹ ಫಲಾನುಭವಿಗಳಿಗೆ ಸೋಲಾರ್ ಕಿಟ್ ಗಳ ಹಸ್ತಾಂತರ

 ಕೊಕ್ಕಡ:  ಸೆಲ್ಕೋ ಫೌಂಡೇಶನ್ ನಿಂದ 25 ಮಂದಿ ಅರ್ಹ ಫಲಾನುಭವಿಗಳಿಗೆ ಸೋಲಾರ್ ಕಿಟ್ ಗಳ ಹಸ್ತಾಂತರ

 

ಕೊಕ್ಕಡ(ಜು.12) : ಸೆಲ್ಕೋ ಫೌಂಡೇಶನ್, ಬೆಂಗಳೂರು ಮತ್ತು ಸೆಲ್ಕೋ ಸೋಲಾರ್ ಲೈಟ್ ಪ್ರೈವೇಟ್ ಲಿಮಿಟೆಡ್ ಇದರ ಯೋಜನೆಯಡಿಯಲ್ಲಿ ಸೌತಡ್ಕದ ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ ಜುಲೈ 12 ರಂದು ಸೆಲ್ಕೋ ಸೋಲಾರ್ ಲೈಟ್ ಪ್ರೈವೇಟ್ ಲಿಮಿಟೆಡ್ ನ DGM ಶ್ರೀ ಗುರುಪ್ರಕಾಶ್ ಶೆಟ್ಟಿ ಸಾಂಕೇತಿಕವಾಗಿ ಸೋಲಾರ್ ಪೆನಲ್ ಅನ್ನು ಸಂಸ್ಥೆಯ ಅಧ್ಯಕ್ಷರಾದ ಶ್ರೀಮತಿ ಸ್ವರ್ಣಗೌರಿ ಅವರಿಗೆ ಹಸ್ತಾಂತರಿಸಿದರು.

ಶ್ರೀ ಗುರುಪ್ರಕಾಶ್ ಶೆಟ್ಟಿ ಇವರು ಬಡ ಜನರನ್ನು ತಲುಪುವಲ್ಲಿ ಸೆಲ್ಕೋ ಮಹತ್ವದ ಪಾತ್ರವನ್ನು ಹೊಂದಿದೆ. ಸೋಲಾರ್ ಅನ್ನು ಜೀವನೋಪಾಯದ ಕಡೆಗೆ ವಿಸ್ತರಿಸುವ ಬಗ್ಗೆ ಉದ್ದೇಶವನ್ನು ಹೊಂದಿದ್ದು 18 ಜೀವನೋಪಾಯದ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲಿದೆ ಮತ್ತು ಎಲ್ಲಾ ದಿವ್ಯಾಂಗರು ಇದರ ಸದುಪಯೋಗವನ್ನು ಪಡೆದುಕೊಂಡು ನೆಮ್ಮದಿಯ ಬಾಳನ್ನು ಬದುಕು ಬೇಕು ಎಂದು ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ನ ಕಾರ್ಯದರ್ಶಿ ರೊ| ಸಂದೇಶ್ ಕುಮಾರ್ ರಾವ್, ಕೊಕ್ಕಡ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ಶ್ರೀ. ಕೃಷ್ಣ ಭಟ್, ಸೆಲ್ಕೋ ಏರಿಯಾ ಮ್ಯಾನೇಜರ್ ಶ್ರೀ ಸಂಜಿತ್ ರೈ ಮತ್ತು ಬೆಳ್ತಂಗಡಿಯ ಬ್ರಾಂಚ್ ಮ್ಯಾನೇಜರ್ ಶ್ರೀ ನವೀನ್ ಕುಮಾರ್ ಜಿ, ಹಾಗೂ ದುರ್ಗಾ ಮಾತೃ ಮಂಡಳಿಯ ಅಧ್ಯಕ್ಷೆ ಶ್ರೀಮತಿ ಶಾಂತಾ ಪಿ ಶೆಟ್ಟಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

DGM ಸೆಲ್ಕೋ ಪ್ರೈವೇಟ್ ಲಿಮಿಟೆಡ್ ಬೆಂಗಳೂರು ಶ್ರೀ ಗುರುಪ್ರಕಾಶ್ ಶೆಟ್ಟಿ ಮತ್ತು ರೋಟರಿ ಕ್ಲಬ್ ಬೆಳ್ತಂಗಡಿ ಕಾರ್ಯದರ್ಶಿಯಾಗಿರುವ ರೊ| ಸಂದೇಶ್ ರಾವ್ ಇವರನ್ನು ಸಂಸ್ಥೆಯ ಪರವಾಗಿ ಗೌರವಿಸಲಾಯಿತು.

ದಕ್ಷಿಣಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಹಾಸನ ಮತ್ತು ಉತ್ತರ ಕನ್ನಡ ಜಿಲ್ಲೆಯ 25 ಮಂದಿ ಅರ್ಹ ಫಲಾನುಭವಿಗಳಿಗೆ 1 ಫ್ಯಾನ್, 1 ಬಲ್ಬ್, 2 ಸೋಲಾರ್ ಪೆನಾಲ್, 2 ಬ್ಯಾಟರಿ ಮತ್ತು ಇನ್ವರ್ಟರ್ ತಲಾ ರೂ. 65,000/- ಮೊತ್ತದ ಸೋಲಾರ್ ಕಿಟ್ ಗಳನ್ನು ಫಲಾನುಭವಿಗಳ ಮನೆಗಳಲ್ಲಿ ಅಳವಡಿಸಲಾಗಿದೆ.

ಸೇವಾಧಾಮ ಸಂಸ್ಥಾಪಕರಾದ ಶ್ರೀ ಕೆ. ವಿನಾಯಕ ರಾವ್ ಪ್ರಸ್ತಾವಿಕ ನುಡಿಗಳನ್ನಾಡಿ ಸ್ವಾಗತಿಸಿದರು. ಡಾಕ್ಯುಮೆಂಟೇಶನ್, ಮಾನಿಟರಿಂಗ್ ಮತ್ತು ಇವಲ್ಯೂಟಿಂಗ್ ಸಂಯೋಜಕರಾದ ಕು| ಸುಮ ನಿರೂಪಿಸಿ, ಸೇವಾಭಾರತಿ ಕಾರ್ಯದರ್ಶಿ ಶ್ರೀ ಬಾಲಕೃಷ್ಣ ಧನ್ಯವಾದವಿತ್ತರು.

Related post

Leave a Reply

Your email address will not be published. Required fields are marked *

error: Content is protected !!