ಉಜಿರೆ: ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ
ಉಜಿರೆ: ಉಜಿರೆ ಗ್ರಾಮದ ನಿವಾಸಿ ಸುರೇಶ್ (40) ಎಂಬ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಬಾಬು ಮುಗೇರ ಇವರ ಪುತ್ರ ಎಂದು ತಿಳಿದುಬಂದಿದ್ದು, ನಿರ್ಮಾಣ ಹಂತದಲ್ಲಿರುವ ಮನೆಯ ಕೋಣೆಯ ಒಳಗೆ ನೇಣು ಬಿಗಿದುಕೊಂಡಿದ್ದಾರೆ. ನಿಖರ ಕಾರಣ ತಿಳಿದುಬರಬೇಕಿದೆ.
ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ