ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಕೇಂದ್ರ ಸಚಿವರಾದ ಜೆ ಪಿ ನಡ್ಡಾ ಅವರನ್ನು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾದ ಶಾಸಕ ಬಿ ವೈ ವಿಜಯೇಂದ್ರ ಭೇಟಿ
ನವದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಕೇಂದ್ರ ಸಚಿವರಾದ ಜೆ ಪಿ ನಡ್ಡಾ ಅವರನ್ನು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾದ ಶಾಸಕ ಬಿ ವೈ ವಿಜಯೇಂದ್ರ ಭೇಟಿ ಮಾಡಿ ಮಾತುಕತೆ ನಡೆಸಿದರು .
ಕರ್ನಾಟಕದ ರಾಜಕೀಯ ವಿದ್ಯಮಾನಗಳು ಹಾಗೂ ಪಕ್ಷದ ಸಂಘಟನೆ, ಹೋರಾಟಗಳು ಅದರಲ್ಲೂ ಇತ್ತೀಚೆಗೆ ಮೈಸೂರು ಚಲೋ ಯಶಸ್ವಿ ಬೃಹತ್ ಪಾದಯಾತ್ರೆ ನಡೆಸಿದ ಪರಿಣಾಮದ ಕುರಿತು ವಿವರಣೆ ನೀಡಲಾಯಿತು.
ಪಾದಯಾತ್ರೆಯ ತರುವಾಯ ಕಾರ್ಯಕರ್ತರಲ್ಲಿ ವ್ಯಕ್ತವಾಗುತ್ತಿರುವ ಸಂಘಟನಾತ್ಮಕ ಉತ್ಸಾಹ ಹಾಗೂ ಸಮರ್ಪಣಾ ಮನೋಭಾವದ ಹೋರಾಟದ ಭಾಗಿತ್ವದ ಕುರಿತು ಮಾಹಿತಿ ನೀಡಲಾಯಿತಲ್ಲದೇ ಸದಸ್ಯತ್ವ ಮಹಾ ಅಭಿಯಾನವನ್ನು ದಾಖಲೆಯ ಪ್ರಮಾಣದಲ್ಲಿ ಗುರಿ ಸಾಧಿಸುವ ಕುರಿತು ಯೋಜಿಸಿರುವ ಚಟುವಟಿಕೆಗಳ ಬಗ್ಗೆ ವಿವರಿಸಿದರು.