ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಹಿಂದಿ ದಿವಸ ಕಾರ್ಯಕ್ರಮ
ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಹಿಂದಿ ದಿವಸ ಆಚರಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿ , ಅನುದಾನಿತ ಪ್ರೌಢಶಾಲೆ ನಾರಾವಿ ಇಲ್ಲಿನ ಹಿಂದಿ ಶಿಕ್ಷಕರಾದ ಶ್ರೀ ಗೋಪಾಲಕೃಷ್ಣ ತುಳುಪುಳೆ ಮಾತನಾಡಿ ರಾಷ್ಟ್ರಭಾಷೆ ಹಿಂದಿಯ ಮಹತ್ವವನ್ನು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮುಖ್ಯೋಪಾಧ್ಯಾಯರಾದ ಶ್ರೀ ಜಯರಾಮ ಮಯ್ಯ ಮಾತನಾಡಿ ಭಾಷೆಯು ಮನಸ್ಸಿನ ಭಾವನೆಯನ್ನು ತಿಳಿಸುವ ಮಾಧ್ಯಮವಾಗಿದೆ. ಭಾಷೆಗಳನ್ನು ಕಲಿಯುವುದರಿಂದ ಸಂಪರ್ಕ ಸಾಧಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ವೇದಿಕೆಯಲ್ಲಿ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಶ್ರೀಮತಿ ಭವಾನಿ ಮಾರ್ಪಾಲು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಗಣೇಶ್ ಕನಿಕ್ಕಿಲ, ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ಶಿಕ್ಷಕರಾದ ಶ್ರೀ ಜಗದೀಶ್ ಉಪಸ್ಥಿತರಿದ್ದು ಹಿಂದಿ ದಿವಸದ ಕುರಿತು ಮಾತನಾಡಿದರು. ವಿದ್ಯಾರ್ಥಿ ಲೋಕೇಶ್ ಹಿಂದಿ ಭಾಷೆಯ ಕುರಿತು ಮಾತನಾಡಿದರು. ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಮಕ್ಕಳಿಂದ ನೃತ್ಯ, ಕಿರು ಪ್ರಹಸನ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು. ಕಾರ್ಯಕ್ರಮದ ಸಂಯೋಜಕರಾದ ಹಿಂದಿ ಶಿಕ್ಷಕಿ ಶ್ರೀಮತಿ ರಾಜಶ್ರೀಯವರು ಅವರು ಸ್ವಾಗತಿಸಿ ವಿದ್ಯಾರ್ಥಿಗಳಾದ ಲಿಖಿತ ವಂದಿಸಿ ಇಂದುಮತಿ ಮತ್ತು ಸೃಷ್ಟಿ ನಿರೂಪಿಸಿದರು.