• October 18, 2024

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ವೃತ್ತಿ ಮಾರ್ಗದರ್ಶಿ ಕಾರ್ಯಾಗಾರ

 ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ವೃತ್ತಿ ಮಾರ್ಗದರ್ಶಿ ಕಾರ್ಯಾಗಾರ

 


ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ವೃತ್ತಿ ಮಾರ್ಗದರ್ಶಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಗಾರಕ್ಕೆ ಮುಖ್ಯ ಅತಿಥಿಗಳಾಗಿ ಶ್ರೀಯುತ ಸುನಿಲ್ ಪಿಜೆ ಉಪನ್ಯಾಸಕರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜು, ಧರ್ಮಸ್ಥಳ ಅವರು ವಿದ್ಯಾರ್ಥಿಗಳ ಮುಂದಿನ ಭವಿಷ್ಯಕ್ಕೆ ಬೇಕಾದ ತಯಾರಿ ಹೇಗಿರಬೇಕು ಯಾವ್ಯಾವ ಕೋರ್ಸುಗಳಿಗೆ ಹೋದರೆ ಯಾವ ಯಾವ ವೃತ್ತಿ ಲಭಿಸುತ್ತದೆ, ಸರಕಾರಿ ಹುದ್ದೆಗಳನ್ನು ಪಡೆಯಲು ಹೇಗೆ ತಯಾರಿ ನಡೆಸಬೇಕು ಯಾವ ಯಾವ ಪರೀಕ್ಷೆಗಳನ್ನು ಎದುರಿಸಬೇಕು ಯಾವೆಲ್ಲ ಅರ್ಹತೆಗಳನ್ನು ಪಡೆಯಬೇಕು ಎಂಬಿತ್ಯಾದಿ ವಿಚಾರಗಳ ವೃತ್ತಿ ಮಾರ್ಗದರ್ಶನವನ್ನು ಸಂಪೂರ್ಣವಾಗಿ ವಿವರಿಸಿದರು.

ಕುಮಾರಿ ಅನ್ಮಿಯಾ ನಡೆಸಿಕೊಟ್ಟ ಈ ಕಾರ್ಯಕ್ರಮದಲ್ಲಿ ಕುಮಾರಿ ಚಿನ್ಮಯಿ ರೈ ಸ್ವಾಗತಿಸಿ ಅಂಜನಾ ರೋಜ್ ಧನ್ಯವಾದಗಳು ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂಬಿ ಇವರ ಮಾರ್ಗದರ್ಶನದಲ್ಲಿ ಮೂಡಿಬಂದ ಈ ಕಾರ್ಯಕ್ರಮದಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳು ಹಾಗೂ ಹೆತ್ತವರು ಹಾಗೂ ಶಿಕ್ಷಕರು ಭಾಗಿಗಳಾಗಿದ್ದರು.

Related post

Leave a Reply

Your email address will not be published. Required fields are marked *

error: Content is protected !!