ಜಿಲ್ಲಾ ಮಟ್ಟದ ಮಕ್ಕಳ ಹಬ್ಬ ನಾಟಕ ಸ್ಪರ್ಧೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಗೆ ದ್ವಿತೀಯ
ಜಿಲ್ಲಾ ಮಟ್ಟದ ಮಕ್ಕಳ ಹಬ್ಬ ಕಾರ್ಯಕ್ರಮವು ಮಂಗಳೂರಿನ ಉರ್ವ ಸ್ಟೋರ್ ನ ಅಂಬೇಡ್ಕರ್ ಭವನದಲ್ಲಿ ನಡೆದಿದ್ದು ಈ ಸಂದರ್ಭದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದ ನಾಟಕಕ್ಕೆ ದ್ವಿತೀಯ ಬಹುಮಾನ ಲಭಿಸಿದೆ.
ಈ ನಾಟಕದಲ್ಲಿ 9 ವಿದ್ಯಾರ್ಥಿಗಳು ಭಾಗವಹಿಸಿದ್ದರು.ಅಂಜನಾ ರೋಸ್,ಆದರ್ಶ್ ಎಚ್ ವೈ, ಸುಘೋಷ್, ಚಿನ್ಮಯಿ ರೈ, ಅಪೂರ್ವ ಎನ್ಎಸ್, ವರ್ಷ, ಧನ್ಯ ಶ್ರೀ,ಅಭಿರಾಮ್,ಮಹಿಮಾ ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಶಾಲಾ ಸಹಶಿಕ್ಷಕಿ ಆಶಾಕುಮಾರಿ ರಚಿಸಿ ನಿರ್ದೇಶಿಸಿದ ಈ ನಾಟಕ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಅವರ ಮಾರ್ಗದರ್ಶನದಲ್ಲಿ ಮೂಡಿ ಬಂದಿತು.