ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ಖಂಡಿಸಿ ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಜೂನ್ 18 ರಂದು ಬೃಹತ್ ಪ್ರತಿಭಟನೆ

ಬೆಳ್ತಂಗಡಿ: ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ, ದೌರ್ಜನ್ಯ, ರಾಜ್ಯ ಸರ್ಕಾರದ ಭ್ರಷ್ಟಾಚಾರ ಹಾಗೂ ದ್ವೇಷ ರಾಜಕೀಯವನ್ನು ವಿರೋಧಿಸಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಜೂನ್ 18 ರಂದು ಸಂತೆಕಟ್ಟೆ ಅಯ್ಯಪ್ಪ ಗುಡಿಯಿಂದ ತಾಲೂಕು ಆಡಳಿತದ ಸೌಧದವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯುವುದಾಗಿ ತಿಳಿಸಲಾಗಿದೆ