ಮಡಂತ್ಯಾರ್: ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಗಳ ಕ್ರೀಡಾ ಸಾಧಕರಾದ ಫ್ಲಾಯಿಡ್ ಮಿಸ್ಕಿತ್ ಹಾಗೂ ಸಿದ್ಧಾರ್ಥ್ ಎಂ.ಸಿ ಟಾರ್ಗೆಟ್ ಬಾಲ್ ಪಂದ್ಯಾಟದಲ್ಲಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ಮಡಂತ್ಯಾರ್: ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಯ ಕ್ರೀಡಾ ಸಾಧಕರಾಗಿರುವ 9ನೇ ತರಗತಿಯ ಪ್ಲಾಯಿಡ್ ಮಿಸ್ಕಿತ್ ಮತ್ತು ದ್ವಿತೀಯ ಕಲಾ ವಿಭಾಗದ ಸಿದ್ದಾರ್ಥ್ ಎಂ.ಸಿ ಇವರು ಭಾರತೀಯ ಟಾರ್ಗೆಟ್ ಬಾಲ್ ಅಸೋಸಿಯೇಶನ್ (ರಿ) ಇದರ ವತಿಯಿಂದ ರಾಜಸ್ಥಾನದ ಅಲ್ಬಾರ್ ನಲ್ಲಿ ಜರುಗಿದ ರಾಷ್ಟ್ರಮಟ್ಟದ ಟಾರ್ಗೆಟ್ ಬಾಲ್ ಪಂದ್ಯಾಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇವರು ನೇಪಾಳದ ಕಠ್ಮಂಡುವಿನಲ್ಲಿ ಜುಲೈ 8 ರಿಂದ ನಡೆಯಲಿರುವ ದಕ್ಷಿಣ ಏಷ್ಯಾ ಟಾರ್ಗೆಟ್ ಬಾಲ್ ಚಾಂಪಿಯನ್ ಶಿಪ್ ನಲ್ಲಿ ಭಾರತ ದೇಶವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ.