ಬೀದಿಬದಿ ವ್ಯಾಪಾರಿಗಳಿಗೆ ಸಾಮರ್ಥ್ಯ ಅಭಿವೃದ್ಧಿ ತರಬೇತಿ
ಬೆಳ್ತಂಗಡಿ: ಬೀದಿ ಬದಿ ವ್ಯಾಪಾರಿಗಳು ಸ್ವಚ್ಛತೆಯನ್ನ ಕಾಪಾಡಿಕೊಂಡು ವ್ಯಾಪಾರವನ್ನು ಮಾಡಿ ನಿಷೇಧಿತ ಪ್ಲಾಸ್ಟಿಕ್ ಬಳಕೆಯನ್ನು ಒಂದು ವಾರದೊಳಗೆ ಸಂಪೂರ್ಣವಾಗಿ ತ್ಯಜಿಸಿ ಪರ್ಯಾಯ ವ್ಯವಸ್ಥೆಯನ್ನ ರೂಡಿಸಿಕೊಳ್ಳಬೇಕು ಎಂದು ಪ.ಪಂ ಉಪಾಧ್ಯಕ್ಷ ಜಯಾನಂದ ಗೌಡ ತಿಳಿಸಿದರು.
ಅವರು ಪಟ್ಟಣ ಪಂಚಾಯತ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೌಶಲ್ಯ ಅಭಿವೃದ್ಧಿ ಕಚೇರಿ ವತಿಯಿಂದ ದೀನ ದಯಾಳ್ ಅಂತಿಯೋದಯ ಯೋಜನೆ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದ ನಗರ ಬೀದಿ ವ್ಯಾಪಾರಿಗಳ ಬೆಂಬಲ ಉಪಘಟಕದಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ಎರಡು ದಿನಗಳ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಗಾರದಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಬೆಳ್ತಂಗಡಿ ಪಟ್ಟಣ ಪಂಚಾಯತ್ ನ ಸ್ಥಾಯಿ ಸಮಿತಿ ಅಧ್ಯಕ್ಷ ಲೋಕೇಶ್ ಇಂಜಿನಿಯರ್ ಮಹಾವೀರ ಆರ್ಗ ಮುಖ್ಯ ಅತಿಥಿಗಳಾಗಿದ್ದರು ಉಜಿರೇಶ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿ ಸಂತೋಷ್ ಕಾರ್ಯಕ್ರಮ ನಿರೂಪಣೆ ಮಾಡಿದರು ನೆರೆದಿದ್ದ ಅತಿಥಿ ಅಭ್ಯಾಗತರಿಗೆ ಸ್ವಾಗತಿಸಿ ಕೊನೆಯಲ್ಲಿ ವಂದಿಸಿದರು.