ಉಜಿರೆ: ಹಳೆಪೇಟೆ ಸ.ಪ್ರೌ ಶಾಲಾ ಹಿಂಬದಿಯಲ್ಲಿ ಕುಸಿದ ಮಣ್ಣು: ಶಾಸಕ ಹರೀಶ್ ಪೂಂಜ ಭೇಟಿ:ತಕ್ಷಣವೇ ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ
ಸರಕಾರಿ ಪ್ರೌಢಶಾಲೆ ಹಳೆಪೇಟೆ ಉಜಿರೆ ಶಾಲೆಯ ಹಿಂಬದಿಯಲ್ಲಿ ಮಣ್ಣು ಕುಸಿದಿದ್ದು ಸ್ಥಳಕ್ಕೆ ಶಾಸಕರಾದ ಶ್ರೀ ಹರೀಶ್ ಪೂಜರವರು ಭೇಟಿ ನೀಡಿ ತಕ್ಷಣವೇ ಸರಿಪಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಉಷಾ ಕಾರಂತ್, ಉಪಾಧ್ಯಕ್ಷರಾದ ರವಿ ಕುಮಾರ್ ಬರಮೇಲು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೋಚ್ಚ ಜಿಲ್ಲಾ ಪಂಚಾಯತ್ ಇಂಜಿನಿಯರ್ ಹರ್ಷಿತ್ , ಶಾಲಾ ಮುಖ್ಯೋಪಾಧ್ಯಾಯರು ಉಪಸ್ಥಿತರಿದ್ದರು