• July 16, 2024

ನಾಳೆ ಮೈರೋಳ್ತಡ್ಕ ವಠಾರದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಮೈರೋಳ್ತಡ್ಕ-ಬಂದಾರು – ಮೊಗ್ರು ಒಕ್ಕೂಟ ಪದಗ್ರಹಣ ಸಮಾರಂಭ

 ನಾಳೆ ಮೈರೋಳ್ತಡ್ಕ ವಠಾರದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಮೈರೋಳ್ತಡ್ಕ-ಬಂದಾರು – ಮೊಗ್ರು ಒಕ್ಕೂಟ ಪದಗ್ರಹಣ ಸಮಾರಂಭ

ಬಂದಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಗುರುವಾಯನಕೆರೆ, ಕಣಿಯೂರು ವಲಯ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಮೈರೋಳ್ತಡ್ಕ, ಬಂದಾರು ಇವುಗಳ ಸಂಯುಕ್ತ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಗಳಾದ ಪರಮಪೂಜ್ಯ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹಾಗೂ ಮಾತೃಶ್ರೀ ಹೇಮಾವತಿ ಹೆಗ್ಗಡೆಯವರ ಮಾರ್ಗದರ್ಶನದೊಂದಿಗೆ ನಾಳೆ ಜೂನ್ 23 ಆದಿತ್ಯವಾರ ಬೆಳಗ್ಗೆ 8.30 ರಿಂದ ಮೈರೋಳ್ತಡ್ಕ ವಠಾರದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಮೈರೋಳ್ತಡ್ಕ-ಬಂದಾರು – ಮೊಗ್ರು ಒಕ್ಕೂಟ ಪದಗ್ರಹಣ ಸಮಾರಂಭ ನಡೆಯಲಿದೆ.


ಬೆಳಗ್ಗೆ 10.30 ರ ನಂತರ ಸಭಾ ಕಾರ್ಯಕ್ರಮ ನಡೆಯಲಿಿಿದೆೆ
ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೈರೋಳ್ತಡ್ಕ ಪ್ರಗತಿ ಬಂಧು ಒಕ್ಕೂಟ ಅಧ್ಯಕ್ಷರಾದ ಕೃಷ್ಣಯ್ಯ ಆಚಾರ್ಯ, ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ದಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ದ.ಕ ಜಿಲ್ಲಾ ನಿರ್ದೇಶಕರಾದ ಮಹಾಬಲ ಕುಲಾಲ್, ತಾಲೂಕು ಜನಜಾಗೃತಿ ವೇದಿಕೆ ನಿಕಟ ಪೂರ್ವ ಅಧ್ಯಕ್ಷರಾದ ಶಾರದಾ ಆರ್ ರೈ, ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಕುರಾಯ ಶ್ರೀ ಸದಾಶಿವ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಬಾಬು ಗೌಡ ಮಾಡ್ಯಲಕoಡ, ಮೈರೋಳ್ತಡ್ಕ ಸ.ಉ.ಹಿ.ಪ್ರಾ. ಶಾಲಾ ಮುಖ್ಯೋಪಾಧ್ಯಾಯಿನಿ ಚಂದ್ರಾವತಿ,ಪ್ರಗತಿ ಪರ ಕೃಷಿಕರಾದ ಲಿಂಗಪ್ಪ ಗೌಡ ಪೋಯ್ಯೋಲೆ,ಧರ್ಣಪ್ಪ ಗೌಡ ಭಾನಡ್ಕ- ಅoಡಿಲ, ಬಾಲಚಂದ್ರ ಕಕೃಣ್ಣಾಯ, ಯುವ ಉದ್ಯಮಿ ಜಯಪ್ರಕಾಶ್ ಕಡಮ್ಮಾಜೆ ಯವರು ಭಾಗವಹಿಸಲಿದ್ದಾರೆ.


ಬಂದಾರು ಒಕ್ಕೂಟದ ಅಧ್ಯಕ್ಷರಾದ ಶ್ರೀಲತಾ, ಮೊಗ್ರು ಒಕ್ಕೂಟದ ಅಧ್ಯಕ್ಷರಾದ ಲೋಕೇಶ್ ಗೌಡ,ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷರಾದ ಚಂದಪ್ಪ ಗೌಡ ನಡುಮಜಲು, ಹಾಗೂ ಸರ್ವ ಸದಸ್ಯರು ಹಾಗೂ ಮೇಲ್ವಿಚಾರಕರು, ಸೇವಾಪ್ರತಿನಿಧಿಗಳು ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

Related post

Leave a Reply

Your email address will not be published. Required fields are marked *

error: Content is protected !!