• July 16, 2024

ರಾಜ್ಯಾದ್ಯಂತ ಕಬಾಬ್ , ಫಿಶ್, ಚಿಕನ್ ಗೆ ಬಳಸುವ ಕೃತಕ ಬಣ್ಣ ನಿಷೇಧ

 ರಾಜ್ಯಾದ್ಯಂತ ಕಬಾಬ್ , ಫಿಶ್, ಚಿಕನ್ ಗೆ ಬಳಸುವ ಕೃತಕ ಬಣ್ಣ ನಿಷೇಧ

ಬೆಂಗಳೂರು: ರಾಜ್ಯಾದ್ಯಂತ ಕಬಾಬ್ , ಫಿಶ್, ಚಿಕನ್ ಗೆ ಬಳಸುವ ಕೃತಕ ಬಣ್ಣವನ್ನು ನಿಷೇಧಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಈ ಕುರಿತಂತೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದು ಅದರಲ್ಲಿ ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ ಕಬಾಬ್ ಗಳು ಗುಣಮಟ್ಟ ಕೃತಕ ಬಣ್ಣ ಬೆರೆಸುವಿಕೆಯಿಂದಾಗಿ ಕಳಪೆಯಾಗಿದೆ.

2011 ರ ನಿಯಮ 16.0. ಗಳಡಿ ಅವಕಾಶವಿಲ್ಲದಿರುವುದರಿಂದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ನಿಯಮ 30(2)(ಎ)ರಡಿ ಪ್ರದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ ವೆಜ್ ಚಿಕನ್ ಫಿಶ್ ಇತರೆ ಕಬಾಬ್ ಗಳ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣಗಳನ್ನು ಬಳಸುವುದನ್ನು ನಿರ್ಬಂಧಿಸಿ ಆದೇಶಿಸಿದೆ. ಉಲ್ಲಂಘನೆಯ ಪ್ರಕರಣಗಳು ಕಂಡುಬಂದಲ್ಲಿ ತಯಾರಿಸುವವರ ಮೇಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006 ರ ನಿಯಮ 59ರಡಿ 7ವರ್ಷಗಳಿಂದ ಜೀವಾವಧಿ ಅವಧಿಯವರೆಗೆ ಜೈಲು ಶಿಕ್ಷೆಯನ್ನು ಮತ್ತು ರೂ 10.00 ಲಕ್ಷಗಳವರೆಗೆ ದಂಡವನ್ನು ವಿಧಿಸಲು ನ್ಯಾಯಾಲಯದಲ್ಲಿ ಮೊಕದ್ದಮೆಗಳನ್ನು ದಾಖಲಿಸಲಾಗುವುದು ಎಂಬುವುದಾಗಿ ಎಚ್ಚರಿಸಿದ್ದಾರೆ

Related post

Leave a Reply

Your email address will not be published. Required fields are marked *

error: Content is protected !!