ದಿನದಿಂದ ದಿನಕ್ಕೆ ವೇಗವಾಗಿ ಬೆಳೆಯುತ್ತಿರುವ ಒಂದು ಊರಾಗಿದೆ ಬೆಳ್ತಂಗಡಿ ತಾಲೂಕಿನ ಮದ್ದಡ್ಕ. ಇಲ್ಲಿನ ನಾಗರಿಕರ ಹೆಚ್ಚಿನ ಸಮಸ್ಯೆಗಳು ಇಲ್ಲಿನ ಸಾಮಾಜಿಕ ಕಾರ್ಯಕರ್ತರ, ಇಲ್ಲಿನ ಜನಪ್ರತಿನಿಧಿಗಳ ಮುತುವರ್ಜಿಯಿಂದ ಪರಿಹಾರವಾಗಿದೆ. ಆದರೆ ಇಲ್ಲಿನ ನಿವಾಸಿಗಳ ನಿತ್ಯ ಭವನೇ ಏನೆಂದರೆ ನೆಟ್ವರ್ಕ್ ಸಮಸ್ಯೆ.
ಮದ್ದಡ್ಕ, ನೇರಳಕಟ್ಟೆ, ಪಣಕಜೆ ಭಾಗದಲ್ಲಿ airtel ಹಾಗೂ bsnl ನ ಮೂರು ಟವರ್ ಗಳಿದ್ದು ಏನೂ ಪ್ರಯೋಜನವಿಲ್ಲದಂತಾಗಿದೆ. ಹೆಚ್ಚಿಗೆ ಹೇಳುವುದಾದರೆ ಈ ಟವರ್ಗಳ ಅಡಿಯಲ್ಲಿ ನಿಂತರೂ ನೆಟ್ವರ್ಕ್ ಸಿಗದಿರುವುದು ವಿಶ್ವದ ವಿಚಿತ್ರ ವಸ್ತುಗಳ ಪಟ್ಟಿಯಲ್ಲಿ ಮದ್ದಡ್ಕದ 3 ಟವರ್ ಗಳು ಸೇರ್ಪಡೆಯಾಗಿದೆಯೋ ಅನ್ನುವ ಸಂಶಯ ಕಾಡುತ್ತಿದೆ.
ಉದ್ಯೋಗಿಗಳಿಗೆ, ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ, ಅಧ್ಯಾಪಕರಿಗೆ ಈ ನೆಟ್ವರ್ಕ್ ಸಮಸ್ಯೆಯಿಂದ ಆಗುವ ತೊಂದರೆ ಅಷ್ಟಿಷ್ಟಲ್ಲ. Online ನಲ್ಲಿ ಆರ್ಡರ್ ಮಾಡಿದ ವಸ್ತುಗಳನ್ನು ಡೆಲಿವೆರಿ ಬಾಯ್ ಗಳು ತಗೊಂಡು ಬಂದು ಆರ್ಡರ್ ಮಾಡಿದವರಿಗೆ ತಲುಪಿಸೋಣ ಅಂದ್ರೆ ಮನೆಯ ಮುಂಭಾಗಕ್ಕೆ ಬಂದರೂ ನೆಟ್ವರ್ಕ್ ಇಲ್ಲಾ.. ಎಂತಾ ದುರಂತ ನೋಡಿ. ಇನ್ನು ಸಂಬಂಧ ಪಟ್ಟ ಕಂಪನಿಯ ಅಧಿಕಾರಿಗಳಿಗೆ ದೂರು ಕೊಟ್ಟು ಪ್ರಯೋಜನವಾಗಿಲ್ಲ. ಆದ್ದರಿಂದ ಸಂಬಂಧಪಟ್ಟವರು ಮದ್ದಡ್ಕ ಆಸುಪಾಸಿನ ನಾಗರಿಕರಿಗೆ ಆಗುವ ತೊಂದರೆಯನ್ನು ಆದಷ್ಟು ಬೇಗ ನಿವಾರಿಸಬೇಕು.