ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಡ ರಚನಾ ಮತ್ತು ಸಿಬ್ಬಂದಿ ವಸತಿಗೃಹ ಕಾಮಗಾರಿಗೆ ನಾಲ್ಕು ಕೋಟಿ ಅರವತೊಂಬತ್ತು ಲಕ್ಷ ಅನುದಾನ ಮಂಜೂರು: ಸಚಿವರಿಗೆ ಅಭಿನಂದನೆ ಸಲ್ಲಿಸಿದ ರಕ್ಷಿತ್ ಶಿವರಾಂ
ಬೆಳ್ತಂಗಡಿ.ತಾಲೂಕಿನ ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಡ ಮತ್ತು ಸಿಬ್ಬಂದಿ ವಸತಿಗೃಹ ರಚನಾ ಕಾಮಗಾರಿಗೆ ನಾಲ್ಕು ಕೋಟಿ ಅರವತ್ತೊಂಬತ್ತು ಲಕ್ಷ ಅನುದಾನ ಮಂಜೂರಾತಿ ಆಗಿದ್ದು. ಇಂದು ವಿಕಾಸ ಸೌಧ ದಲ್ಲಿ ಅರೋಗ್ಯ ಮತ್ತು
ಕುಟುಂಬ ಕಲ್ಯಾಣ , ಹಾಗೂ
ದಕ್ಷಿಣ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಬೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಚ್ಚಿನ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರಾದ ಪ್ರಮೋದ್ ಕುಮಾರ್ ಮಚ್ಚಿನ ನ್ಯೂ ಫ್ರೆಂಡ್ಸ್ ಸ್ಪೊರ್ಟ್ಸ್ ಕ್ಲಬ್ ಅಧ್ಯಕ್ಷರಾದ ನಾರಾಯಣ ಪೂಜಾರಿ ಮಚ್ಚಿನ ,ಮಡಂತ್ಯಾರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಬಿ ರಾಜಶೇಖರ್ ಶೆಟ್ಟಿ ಮಡಂತ್ಯಾರು ,ಜಿಲ್ಲಾ ಅರೋಗ್ಯ್ರ ರಕ್ಷಾ ಸಮಿತಿಯ ಸದಸ್ಯರಾದ ಅಬ್ದುಲ್ ಕರೀಮ್ ಕಳಿಯ ಉಪಸ್ಥಿತರಿದ್ದರು.