ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ
ಉಜಿರೆ : ಆ15.”ವರ್ಷದ ಪ್ರತಿಯೊಂದು ದಿನವೂ ಸ್ವಾತಂತ್ರ್ಯ ದಿನ ಆಚರಿಸುವ ಹಾಗೆ ನಮ್ಮ ಜೀವನವನ್ನು ತ್ಯಾಗ ಮಾಡಿರುವವರನ್ನು ನಾವು ಪ್ರತಿದಿನವೂ ನೆನೆಯಲೇ ಬೇಕು. ದೇಶದ ಸಂಸ್ಕೃತಿ ಸಂಸ್ಕಾರವನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮದು.” ಎಂದು ಉಜಿರೆ ಗ್ರಾಮ ಪಂಚಾಯತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀ ಪಿ.ಹೆಚ್ ಪ್ರಕಾಶ್ ಶೆಟ್ಟಿ ಮೊಚ್ಚ ಇವರು ಹೇಳಿದರು.
ಇವರು ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಆಚರಿಸಿದ ಸ್ವಾತಂತ್ರ್ಯ ದಿನಾಚರಣೆಯ ಮುಖ್ಯ ಅತಿಥಿಯಾಗಿ ಆಗಮಿಸಿ, ಧ್ವಜಾರೋಹಣ ನಡೆಸಿ, ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಾದ ನೃತ್ಯ, ದೇಶಭಕ್ತಿ ಗೀತೆ, ಕವನ ವಾಚನ ಹಾಗೂ ಭಾಷಣ ಆಯೋಜಿಸಲಾಗಿತ್ತು.
ಶಾಲಾ ಮುಖ್ಯೋಪಾಧ್ಯಾಯ ಶ್ರೀ ಮನ್ಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ವಿದ್ಯಾರ್ಥಿಗಳಾದ ಮಾಧವ್ ಹಾಗೂ ಸಹಮ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯ ಶ್ರೀ ಮನ್ಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿ, ವಿದ್ಯಾರ್ಥಿಗಳಾದ ಮೆಲ್ರಿನ್ ಹಾಗೂ ತನ್ವಿ ವಂದಿಸಿದರು.