ಧರ್ಮಸ್ಥಳ: ಧರ್ಮಸ್ಥಳ ಗ್ರಾಮದ ಕನ್ಯಾಡಿ ರಾಮಮಂದಿರದ ಬಳಿಯ ಕ್ರಾಸ್ ನಲ್ಲಿ ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಡಿ.30 ರಂದು ನಡೆದಿದೆ. ಪರಿಣಾಮ ಬೈಕ್ ನ ಮುಂಭಾಗದ ಚಕ್ರ ಕಳಚಿ ಬಿದ್ದಿದೆ. ಧರ್ಮಸ್ಥಳದಿಂದ ಉಜಿರೆ ಕಡೆ ಬರುತ್ತಿದ್ದ ಬೈಕ್ ಹಾಗೂ ಧರ್ಮಸ್ಥಳದ ಕಡೆಗೆ ಹೋಗುತ್ತಿದ್ದ ಕಾರು ನಡುವೆ ಅಪಘಾತ ಸಂಭವಿಸಿದೆ. ಬೈಕ್ ಸವಾರ ಧರ್ಮಸ್ಥಳ ನಿವಾಸಿ ನಿತೇಶ್(28) ಗಂಭೀರ ಗಾಯಗೊಂಡಿದ್ದು ತಕ್ಷಣ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಾರು […]Read More
Tags :Accident
ಬಂಟ್ವಾಳ: ಕಾರಿಗೆ ಡಿಕ್ಕಿ ಹೊಡೆದು ಮನೆಗೆ ನುಗ್ಗಿದ ಪಿಕಪ್: ಕೂದಲೆಳೆ ಅಂತರದಲ್ಲಿ ಪಾರಾದ
ಬಂಟ್ವಾಳ: ಮಡಂತ್ಯಾರ್ ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ಪಿಕಪ್ ಹಾಗೂ ಮಂಗಳೂರಿನಿಂದ ಮಡಂತ್ಯಾರ್ ಕಡೆ ಸಾಗುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು,ಪಿಕಪ್ ವಾಹನ ಮನೆಗೆ ನುಗ್ಗಿದ ಘಟನೆ ನ.26 ರಂದು ಬಂಟ್ವಾಳದಲ್ಲಿ ನಡೆದಿದೆ. ಪರಿಣಾಮ ಮನೆಗೆ ಅಪಾರ ಹಾನಿಯಾಗಿದ್ದು ಮನೆಯವರು ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದಾರೆ. ಚಾಲಕರಿಬ್ಬರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಭಾರೀ ಅನಾಹುತದಿಂದ ಬಚಾವ್ ಆಗಿದ್ದಾರೆ.Read More
ನಿಡ್ಲೆ : ನಿಡ್ಲೆ ಗ್ರಾಮದ ಕುದ್ರಾಯ ಎಂಬಲ್ಲಿ ಭೀಕರ ರಸ್ತೆ ಅಪಘಾತ ನಡೆದಿದ್ದು ಇದರಲ್ಲಿ ಓರ್ವ ಸಾವನ್ನಪ್ಪಿದ್ದು ,ಏಳು ಜನರಿಗೆ ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳದ ಕುದ್ರಾಯದಲ್ಲಿ ನ.23 ರಂದು ಸಂಜೆ ನಡೆದಿದೆ. ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಗಮಿಸುತ್ತಿದ್ದ ಮಂಡ್ಯ ಜಿಲ್ಲೆಯ ಹತ್ತು ಮಂದಿಯ ಕುಟುಂಬ ನಿಡ್ಲೆ ಗ್ರಾಮದ ಕುದ್ರಾಯ ಎಂಬಲ್ಲಿ ಬೊಲೇರೋ ವಾಹನವನ್ನು ರಸ್ತೆಯ ಬಲಕ್ಕೆ ಪಾರ್ಕ್ ಮಾಡಿ ನಿಲ್ಲಿಸಿ ಇಳಿದು ಅಂಗಡಿ ಹೋಗುತ್ತಿದ್ದರು ಈ ವೇಳೆ ಧರ್ಮಸ್ಥಳ ಡಿಪೋದಿಂದ ಮೈಸೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ […]Read More
ಕೌಕ್ರಾಡಿ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಟೆಂಪೋ: ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಆಗಮಿಸಿದ
ಕೌಕ್ರಾಡಿ: ಟೆಂಪವೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಘಟನೆ ನ.13 ರಂದು ಬೆಳ್ತಂಗಡಿ ತಾಲೂಕಿನ ಕೌಕ್ರಾಡಿ ಗ್ರಾಮದ ಮೂಡುಬೈಲು ಎಂಬಲ್ಲಿ ನಡೆದಿದೆ.ವಾಹನದಲ್ಲಿದ್ದ ಹಲವಾರು ಪ್ರಯಾಣಿಕರಿಗೆ ಗಾಯಗಳಾಗಿದ್ದು ಸ್ಥಳೀಯರು ಕೊಕ್ಕಡ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಆಗಮಿಸಿದ್ದ ಯಾತ್ರಾರ್ಥಿಗಳು ದೇವರ ದರ್ಶನ ಪಡೆದು ನಂತರ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಹೋದ ವೇಳೆ ಈ ಘಟನೆ ಸಂಭವಿಸಿದೆ.Read More
ಬೆಳ್ಮಣ್: ಹಿಂದಿನಿಂದ ಬರುತ್ತಿದ್ದ ಕಾರೊಂದು ಬೈಕ್ ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಳ್ಮಣ್ ನೀರ್ಚಲ್ ಬಳಿ ಅ.29ರಂದು ನಡೆದಿದೆ. ಮೃತಪಟ್ಟ ವ್ಯಕ್ತಿ ಮುದರಂಗಡಿ ನಿವಾಸಿ ಜಾರ್ಜ್ ಡಿಸೋಜ(74) ಎಂದು ಗುರುತಿಸಲಾಗಿದೆ. ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮನೆಗೆ ವಾಪಾಸ್ಸಾಗುತ್ತಿರುವ ವೇಳೆ ಹಿಂದಿನಿಮದ ಬಮದ ಕಾರೊಂದು ಬೈಕಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಪರಿಣಾಮ ರಸ್ತೆಗೆ ಎಸೆಯಲ್ಪಟ್ಟ ಬೈಕ್ ಸವಾರ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Read More
ಗೇರುಕಟ್ಟೆ:ಗೇರುಕಟ್ಟೆ ವ್ಯಾಪ್ತಿಯ ರೇಶ್ಮೆ ರೋಡ್ ನಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಣಿವೆಗೆ ಬಿದ್ದ ಘಟನೆ ಸೆ.1 ರಂದು ಮುಂಜಾನೆ ನಡೆದಿದೆ. ಕಾರು ಚಾಲಕ ಹಾಗೂ ಅದರಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ಸ್ಥಳೀಯರ ಸಹಾಯದಿಮದ ಕಾರನ್ನು ಮೇಲಕ್ಕೆತ್ತಲಾಗಿದೆ.Read More