ಬೆಳ್ತಂಗಡಿ: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ. ಮಂಗಳೂರು ವತಿಯಿಂದ ಮಂಗಳೂರಿನ ಕೊರ್ಡೆಲ್ ಹಾಲ್ ನಲ್ಲಿ 2022-23ನೇ ಸಾಲಿನ 37ನೇ ವಾರ್ಷಿಕ ಸಭೆ ನಡೆಯಿತು. ಕಾರ್ಯಕ್ರಮದಲ್ಲಿ ಒಕ್ಕೂಟದ ಜಿಲ್ಲಾವಾರು ಉತ್ತಮ ಸಂಘ ಪ್ರಶಸ್ತಿಯು ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ನೀಡಲಾಯಿತು. ಪ್ರಶಸ್ತ್ರಿಯನ್ನು ಸಂಘದ ಅಧ್ಯಕ್ಷರಾದ ಮಮತಾ ಕೆ ಮತ್ತು ಕಾರ್ಯನಿರ್ವಹಣಾಧಿಕಾರಿ ಭವ್ಯ ಕೆ. ಎಸ್ ಪ್ರಶಸ್ತಿಯನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ. […]Read More
Tags :Bandaru
ಬಂದಾರು: ಆ.18 ಬಂದಾರು ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ದಿನೇಶ್ ಗೌಡ ಖಂಡಿಗ ಹಾಗೂ ಉಪಾಧ್ಯಕ್ಷೆಯಾಗಿ ಆಯ್ಕೆಯಾಗಿರುವ ಶ್ರೀಮತಿ ಪುಷ್ಪಾವತಿ ಬರಮೇಲು ಇವರಿಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ನಿಕಟಪೂರ್ವ ಅಧ್ಯಕ್ಷೆಯಾದ ಶ್ರೀಮತಿ ಪರಮೇಶ್ವರಿ ಕೆ ಗೌಡ ಪುಯಿಲ,ಉಪಾಧ್ಯಕ್ಷರಾದ ಗಂಗಾಧರ ಗೌಡ ಮುಗೇರಡ್ಕ,ಗ್ರಾಮ ಪಂಚಾಯತ್ ಸದಸ್ಯರು,ಪಕ್ಷದ ಪ್ರಮುಖರು, ಶಕ್ತಿಕೇಂದ್ರ ಪ್ರಮುಖರು,ಬೂತ್ ಸಮಿತಿ ಅಧ್ಯಕ್ಷ ಕಾರ್ಯದರ್ಶಿ ಉಪಸ್ಥಿತರಿದ್ದರು.Read More
ಬಂದಾರು: ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಂಟಾಲಪಲ್ಕೆ ಯಲ್ಲಿ ಕಳೆದ 15 ವರ್ಷಗಳಿಂದ ಕರ್ತವ್ಯ ಸಲ್ಲಿಸುತ್ತಿದ್ದ ಶಿಕ್ಷಕರಾದ ಸುರೇಶ್ ಮಾಚಾರ್ ಈ ಬಾರಿಯ ಶಿಕ್ಷಕರ ಸಾರ್ವತ್ರಿಕ ವರ್ಗಾವಣೆಯಲ್ಲಿ ವರ್ಗಾವಣೆ ಹೊಂದಿದ್ದು,ತಮ್ಮ ಕರ್ತವ್ಯದ ನೆನಪಿಗಾಗಿ ಶಾಲೆಗೆ ಧ್ವಜ ಸ್ಥಂಭದ ಕೊಡುಗೆ ನೀಡಿದರು. ಇದನ್ನು 77ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ.ಸದಸ್ಯರಾದ ಶ್ರೀನಿವಾಸ ಗೌಡರವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷರಾದ ಬಾಲಕೃಷ್ಣ ಗೌಡ, ಶಾಲಾ ಶಿಕ್ಷಕ ವೃಂದ,ಪೋಷಕರು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.Read More
ಬಂದಾರು: ಬಂದಾರು ಗ್ರಾಮ ಪಂಚಾಯತ್ ನಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ ಇವರು 77 ನೆ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿ ಪಂಚಾಯತ್ ನ ಸಮಗ್ರ ಅಭಿವೃದ್ದಿಗೆ ಸಾರ್ವಜನಿಕರ ಸಹಕಾರ ಬಯಸುತ್ತಾ ,ಸಮಸ್ತರಿಗೂ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಉಪಾಧ್ಯಕ್ಷೆ ಶ್ರೀಮತಿ ಪುಷ್ಪಾವತಿ ಬರಮೇಲು, ಬಂದಾರು ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷರಾದ ಶ್ರೀಮತಿ ಪರಮೇಶ್ವರಿ ಕೆ ಗೌಡ,ಮಾಜಿ ಅಧ್ಯಕ್ಷರಾದ ಉದಯ ಕುಮಾರ್ ಬಿ.ಕೆ ವಕೀಲರು,ಅಬ್ಬಾಸ್ ಬಟ್ಲಡ್ಕ, ನಿಕಟಪೂರ್ವ ಉಪಾಧ್ಯಕ್ಷರಾದ ಗಂಗಾಧರ ಪೂಜಾರಿ ಮುಗೆರಡ್ಕ […]Read More
ಬಂದಾರು: ವಿವೇಕಾನಂದ ಕಾಲೇಜು ಪುತ್ತೂರಿನಲ್ಲಿ ನಡೆದ, ಈಶ ಸಂಸ್ಥೆಯ 15 ನೇ ಗ್ರಾಮೋತ್ಸವದ ಆಶ್ರಯದಲ್ಲಿ, ಆಡೋಣ ಸಂಭ್ರಮಿಸೋಣ ಮುನ್ನಡೆಯೋಣ ಎಂಬ ಧ್ಯೇಯ ವಾಕ್ಯದೊಂದಿಗೆ ಆ.13 ರಂದು ನಡೆದ ವಾಲಿಬಾಲ್ ಪಂದ್ಯಾವಳಿಯಲ್ಲಿ ಬಂದಾರು ಗ್ರಾಮವು ಪ್ರಥಮ ಬಹುಮಾನವನ್ನು ಪಡೆದುಕೊಂಡಿದೆ. ದ.ಕ ಪ್ರತಿನಿಧಿಸುತ್ತಿರುವ ತಂಡವು ಸೆ.3 ರಂದು ಮೈಸೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಪಂದ್ಯಾವಳಿಗೆ ಆಯ್ಕೆಯಾಗಿದೆ.Read More
ಬಂದಾರು: ಆ 12. ಬಂದಾರು ಗ್ರಾಮದ ಸ.ಹಿ.ಪ್ರಾ. ಶಾಲೆ ಪೆರ್ಲ-ಬೈಪಾಡಿ ಇಲ್ಲಿಂದ ವರ್ಗಾವಣೆಗೊಂಡ ಶಿಕ್ಷಕಿ ಕುಮಾರಿ ದೇವಿಕಾ ಇವರ ಬೀಳ್ಕೊಡುಗೆ ಸಮಾರಂಭ ಆ.12 ರಂದು ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಬಂದಾರು ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಅನಿತಾ, ಎಸ್.ಡಿ ಎಂ.ಸಿ ಅಧ್ಯಕ್ಷರಾದ ದಾಮೋದರ ಹಾಗೂ ಎಸ್.ಡಿ ಎಂ.ಸಿ ಸದಸ್ಯರು, ಕುಪ್ಪೆಟ್ಟಿ ಕ್ಲಸ್ಟರ್ ನ ಸಿ.ಆರ್.ಪಿ ಸಂಧ್ಯಾ ಬಿ,ಪೋಷಕರು, ಶಿಕ್ಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ವರ್ಗಾವಣೆಗೊಂಡ ಶಿಕ್ಷಕಿ ಶಾಲೆಗೆ ಮಿಕ್ಸರ್ ಗ್ರೈಂಡರ್ ಅನ್ನು ಉಡುಗೊರೆಯಾಗಿ ನೀಡಿದರು.Read More
ಬಂದಾರು; ಬಂದಾರು ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ದಿನೇಶ್ ಗೌಡ ಖoಡಿಗ ಹಾಗೂ ಉಪಾಧ್ಯಕ್ಷೆಯಾಗಿ ಪುಷ್ಪಾವತಿ ಬರಮೇಲು ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಾಮಾಜಿಕ ವಲಯ ಅರಣ್ಯಾಧಿಕಾರಿ ಸಂಧ್ಯಾ.ಪಿ.ಡಿ ಕಾರ್ಯನಿರ್ವಹಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿ ಮೋಹನ್ ಬಂಗೇರ,ಸಿಬ್ಬಂದಿ ವರ್ಗ, ಗ್ರಾಮ ಪಂಚಾಯತ್ ಸದಸ್ಯರು,ಬಿಜೆಪಿ ಪಕ್ಷದ ಪ್ರಮುಖರು,ಕಾರ್ಯಕರ್ತರು ಉಪಸ್ಥಿತರಿದ್ದರು.Read More
ಬಂದಾರು : ಗ್ರಾಮ ಪಂಚಾಯತ್ ಬಂದಾರು, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ಅಂಧತ್ವ ವಿಭಾಗ ) ಮಂಗಳೂರು ದ.ಕ, ಪ್ರಾಥಮಿಕ ಆರೋಗ್ಯ ಕೇಂದ್ರ ಕಣಿಯೂರು, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಮಂಗಳೂರು-ಉಡುಪಿ -ಸುಳ್ಯ. ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್, ಮಂಗಳೂರು, ದ.ಕ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ (ರಿ.) ಕಣಿಯೂರು ವಲಯ, ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ (ನಿ.) ಬಂದಾರು, ಮಂಗಳ ಕಲಾ ಸಾಹಿತ್ಯ ವೇದಿಕೆ ಪಟ್ಟೆ (ರಿ.) […]Read More
ಬಂದಾರು :ರಾಷ್ಟ್ರಮಟ್ಟದಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿ ಗುರುತಿಸಿಕೊಂಡಿರುವ ಹೆಮ್ಮೆಯ ಸರಕಾರಿ ಉನ್ನತಿಸಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಸರ್ವತೋಮುಖ ಅಭಿವೃದ್ಧಿಯ ದೃಷ್ಟಿಯಲ್ಲಿ ಅಡಿಕೆ ತೋಟ ನಿರ್ಮಾಣವಾಗಿದೆ. ಈ ತೋಟದಲ್ಲಿ ಕಳೆ ಕೀಳುವುದು, ಅಡಿಕೆ ಗಿಡಕ್ಕೆ ಸೊಪ್ಪು ಹಾಕುವ ಕೆಲಸವೂ ಶ್ರಮದಾನದ ಮೂಲಕ ಶಾಲಾಭಿವೃದ್ಧಿ ಸಮಿತಿ, ಪೋಷಕ ವೃಂದ ಹಾಗೂ ಹಳೇವಿದ್ಯಾರ್ಥಿ ಸಂಘದ ಒಗ್ಗೂಡುವಿಕೆಯಲ್ಲಿ ಜುಲೈ.13 ರಂದು ನೆರವೇರಿತು. ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಉಮೇಶ್ ಗೌಡ ಪೋಯ್ಯೋಲೆ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸುಂದರ […]Read More
ಪದ್ಮುಂಜ: ಮೊಗ್ರು, ಕಣಿಯೂರು, ಬಂದಾರು, ಇಳಂತಿಲ, ಉರುವಾಲು ಶಕ್ತಿಕೇಂದ್ರ ಚುನಾವಣಾ ಅವಲೋಕನ ಸಭೆ
ಪದ್ಮುಂಜ: ಪದ್ಮುಂಜ ಸಹಕಾರಿ ಭವನದಲ್ಲಿ ಜೂ.29 ರಂದು ಬಂದಾರು, ಮೊಗ್ರು, ಕಣಿಯೂರು, ಉರುವಾಲು, ಇಳಂತಿಲ ಶಕ್ತಿಕೇಂದ್ರ ಚುನಾವಣಾ ಅವಲೋಕನ ಸಭೆಯು ನಡೆಯಿತು. ಈ ಸಂದರ್ಭದಲ್ಲಿ ಶಾಸಕರಾದ ಹರೀಶ್ ಪೂಂಜ, ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಬಂದಾರು ಪಂ.ಅಧ್ಯಕ್ಷೆ ಪರಮೇಶ್ವರಿ ಕೆ ಗೌಡ, ಕಣಿಯೂರು ಅಧ್ಯಕ್ಷೆ ಗಾಯತ್ರಿ, ಇಳಂತಿಲ ಅಧ್ಯಕ್ಷೆ ಚಂದ್ರಿಕಾ ಭಟ್, ಮಹಾಶಕ್ತಿ ಕೇಂದ್ರ ಶಕ್ತಿ ಕೇಂದ್ರ ಪ್ರಮುಖರು, ಕೋಶಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಇನ್ನಿತರರು ಉಪಸ್ಥಿತರಿದ್ದರು.Read More