ಬೆಳ್ಮಣ್: ಹಿಂದಿನಿಂದ ಬರುತ್ತಿದ್ದ ಕಾರೊಂದು ಬೈಕ್ ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಳ್ಮಣ್ ನೀರ್ಚಲ್ ಬಳಿ ಅ.29ರಂದು ನಡೆದಿದೆ. ಮೃತಪಟ್ಟ ವ್ಯಕ್ತಿ ಮುದರಂಗಡಿ ನಿವಾಸಿ ಜಾರ್ಜ್ ಡಿಸೋಜ(74) ಎಂದು ಗುರುತಿಸಲಾಗಿದೆ. ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮನೆಗೆ ವಾಪಾಸ್ಸಾಗುತ್ತಿರುವ ವೇಳೆ ಹಿಂದಿನಿಮದ ಬಮದ ಕಾರೊಂದು ಬೈಕಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಪರಿಣಾಮ ರಸ್ತೆಗೆ ಎಸೆಯಲ್ಪಟ್ಟ ಬೈಕ್ ಸವಾರ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Read More
Tags :Belman
ಹೊಸ್ಮಾರ್: ಸಂತ ಜೋಸೆಫ್ ಹಿರಿಯ ಪ್ರಾಥಮಿಕ ಶಾಲೆ ಬೆಲ್ಮಣ್ ನಲ್ಲಿ ಸೆ.2 ರಂದು ನಡೆದ ಕಾರ್ಕಳ ತಾಲೂಕು ಮಟ್ಟದ ಖೋ ಖೋ ಪಂದ್ಯದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಹೊಸ್ಮಾರಿನ ಬಾಲಕಿಯರು ಜಯಶಾಲಿಯಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.Read More